Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:76 - ಕನ್ನಡ ಸಮಕಾಲಿಕ ಅನುವಾದ

76 “ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ. ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

76 ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

76 ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

76 ಮಗುವೇ, ನೀನಾದರೋ ಪರಾತ್ಪರನ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

76 “ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

76 “ಅನಿ ತುಕಾ, ಮಾಜ್ಯಾ ಪೊರಾ,ಮಹೊನ್ನತ್ ದೆವಾಚೊ ಪ್ರವಾದಿ ಮನುನ್ ಬಲ್ವುತ್ಯಾತ್. ಧನಿಯಾಚಿ ವಾಟ್ ತಯಾರ್ ಕರುಕ್, ತಿಯಾ ತೆಚ್ಯಾ ಫಿಡೆ-ಫಿಡೆ ಜಾತೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:76
22 ತಿಳಿವುಗಳ ಹೋಲಿಕೆ  

“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅದಕ್ಕೆ ಯೋಹಾನನು, “ಪ್ರವಾದಿ ಯೆಶಾಯನು ಹೇಳಿದಂತೆ, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವೇ ನಾನು,” ಎಂದು ಹೇಳಿದನು.


ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು.


“ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವು,” ಎಂದು ಪ್ರವಾದಿಯಾದ ಯೆಶಾಯನ ಮೂಲಕ ಸೂಚಿತನಾದವನು ಇವನೇ.


ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.


ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.


ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು.


ಆದರೆ ನಾವು, ‘ಮನುಷ್ಯರಿಂದ ಬಂತು’ ಎಂದು ಹೇಳುವುದಾದರೆ, ನಮಗೆ ಜನರ ಭಯವಿದೆ. ಏಕೆಂದರೆ ಯೋಹಾನನು ನಿಜವಾಗಿಯೂ ಪ್ರವಾದಿ ಎಂದು ಎಲ್ಲರೂ ಎಣಿಸಿಕೊಂಡಿರುವರು,” ಎಂದು ತಮ್ಮಲ್ಲಿ ಚರ್ಚಿಸಿಕೊಂಡರು.


‘ನಾನು ಕ್ರಿಸ್ತನಲ್ಲ, ಆದರೆ ಅವರ ಮುಂದೂತನೆಂದು,’ ಹೇಳಿದ್ದಕ್ಕೆ ನೀವೇ ಸಾಕ್ಷಿ.


ಅವರೇ ನನ್ನ ಬಳಿಕ ಬರುವವರು. ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.


ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.


‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು.


“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.


“ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.


ಚೀಯೋನಿನ ವಿಷಯವಾಗಿ, “ಸಕಲ ಜನಾಂಗದವರೂ ಚೀಯೋನಿನಲ್ಲಿ ಹುಟ್ಟಿದರು. ಮಹೋನ್ನತರೇ ಅದನ್ನು ಸ್ಥಿರಪಡಿಸುವರು,” ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು