Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:79 - ಕನ್ನಡ ಸಮಕಾಲಿಕ ಅನುವಾದ

79 ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುವವರಿಗೆ ಪ್ರಕಾಶಿಸಿ, ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

79 ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

79 ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

79 ಕತ್ತಲಲ್ಲಿಯೂ ಮರಣಾಂಧಕಾರದಲ್ಲಿಯೂ ವಾಸಿಸಿರುವವರಾದ ನಮಗೆ ಪ್ರಕಾಶ ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

79 ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು. ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

79 ಅನಿ ಸರ್‍ಗಾ ವೈನಾ ಮರ್‍ನಾಚ್ಯಾ ಭಿಂಯಾತ್ ಅನಿ ದಾಟ್ ಕಾಳ್ಕಾತ್ ಜಿವನ್ ಕರ್‍ತಲ್ಯಾಂಚ್ಯಾ ಸಗ್ಳ್ಯಾಂಚ್ಯಾ ವರ್‍ತಿ ಉಜ್ವೊಡ್ ಘಾಲುಕ್, ಅನಿ ಅಮ್ಚಿ ಪಾವ್ಲಾ ಶಾಂತಿಚ್ಯಾ ವಾಟೆನ್ ಚಲ್ವುನ್ ಘೆವ್ನ್ ಜಾವ್ಕ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:79
36 ತಿಳಿವುಗಳ ಹೋಲಿಕೆ  

ಕತ್ತಲೆಯಲ್ಲಿ ನಡೆಯುವ ಈ ಜನರಿಗೆ ಮಹಾ ಬೆಳಕು ಕಾಣಿಸಿತು, ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಉದಯಿಸಿತು.


ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.


ನನ್ನಲ್ಲಿ ನಂಬಿಕೆಯಿಡುವವರು ಕತ್ತಲೆಯಲ್ಲಿ ಉಳಿಯಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.


ನಾನು ಈ ಲೋಕದಲ್ಲಿರುವಾಗ ಲೋಕದ ಬೆಳಕಾಗಿದ್ದೇನೆ,” ಎಂದರು.


ಕತ್ತಲೆಯೊಳಗಿಂದಲೂ, ಮರಣದ ನೆರಳಿನಿಂದಲೂ ದೇವರು ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟರು.


ಕೆಲವರು ಕತ್ತಲಲ್ಲಿ ಮತ್ತು ಮರಣದ ನೆರಳಿನಲ್ಲಿ ಕುಳಿತರು, ಕೆಲವರು ಸಂಕಟದಲ್ಲಿಯೂ, ಕಬ್ಬಿಣದ ಬೇಡಿಗಳಲ್ಲಿ ಬಂಧಿತರಾಗಿ ಸೆರೆಬಿದ್ದವರು ಕೆಲವರು.


ನೀನು ಬಂಧಿತರಿಗೆ, ‘ಹೊರಗೆ ಬನ್ನಿರಿ,’ ಕತ್ತಲೆಯಲ್ಲಿರುವವರಿಗೆ, ‘ಬೆಳಕಿಗೆ ಬನ್ನಿರಿ,’ ಎಂದು ಹೇಳಬಹುದು. “ಅವರು ದಾರಿಗಳಲ್ಲಿ ಮೇಯಿಸುವರು. ಅವರ ಎಲ್ಲಾ ಎತ್ತರವಾದ ಪ್ರದೇಶಗಳೂ ಕೂಡ ಅವರಿಗೆ ಹುಲ್ಲುಗಾವಲಾಗಿರುವುವು.


ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ.


ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”


ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.


ಸಮಾಧಾನದ ಮಾರ್ಗವನ್ನೇ ಅವರು ಅರಿಯರು.”


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.


ಸಮಾಧಾನದ ಮಾರ್ಗವನ್ನೇ ಅವರು ಅರಿಯರು. ಅವರ ದಾರಿಗಳಲ್ಲಿ ನ್ಯಾಯವಿಲ್ಲ. ತಮ್ಮ ಹಾದಿಗಳನ್ನು ವಕ್ರಮಾಡಿಕೊಂಡಿದ್ದಾರೆ. ಅವುಗಳಲ್ಲಿ ನಡೆಯುವವರೆಲ್ಲರೂ ಸಮಾಧಾನವನ್ನರಿಯರು.


“ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಆದರೂ ನರಿಗಳ ವಾಸಸ್ಥಳದಂತೆ ನಮ್ಮ ದೇಶವಿದೆ. ಕಾರ್ಗತ್ತಲಿನ ನೆರಳು ನಮ್ಮನ್ನು ಮುಚ್ಚಿಬಿಟ್ಟಂತಿದೆ.


ಯಾವನು ಯೆಹೋವ ದೇವರಿಗೆ ಭಯಪಡುವನೋ, ಅಂಥವನಿಗೆ ಅವರು ಆಯ್ದುಕೊಳ್ಳತಕ್ಕ ಮಾರ್ಗವನ್ನು ಬೋಧಿಸುವರು.


ಜ್ಞಾನದ ಮಾರ್ಗಗಳು ಸಂತೋಷಕರ; ಅದರ ದಾರಿಗಳೆಲ್ಲಾ ಶಾಂತಿಯ ದಾರಿಗಳೇ.


ಆ ದೇಶದಲ್ಲಿ ಕಾರ್ಗತ್ತಲೂ, ಗಾಢಾಂಧಕಾರವೂ ಮರಣದ ತುಂಬಿರುವುದು. ಕ್ರಮವಿಲ್ಲದ ಆ ದೇಶದಲ್ಲಿ ಬೆಳಕೂ ಕತ್ತಲೆಯೇ.”


ನಿನ್ನ ವಿಮೋಚಕನೂ, ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರ ಮಾತಿದು, “ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವವನೂ ಆದ ನಾನೇ ನಿನ್ನ ಯೆಹೋವ ದೇವರು ಆಗಿದ್ದೇನೆ.


ನೀತಿಯ ಮಾರ್ಗದಲ್ಲಿಯೂ ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ.


ಕತ್ತಲೂ ಕಾರ್ಗತ್ತಲೂ ಆ ದಿನವನ್ನು ವಶಮಾಡಿಕೊಳ್ಳಲಿ; ಮೋಡವು ಅದರ ಮೇಲೆ ಕವಿಯಲಿ; ಕತ್ತಲೆ ಅದನ್ನು ಭಯಪಡಿಸಲಿ.


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು