ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
ಇವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತಮ್ಮ ತಂದೆ ಆರೋನನಿಗೆ ಆಜ್ಞಾಪಿಸಿದ ಹಾಗೆ, ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ, ಯೆಹೋವ ದೇವರ ಮನೆಯಲ್ಲಿ ಸೇವೆ ಮಾಡುವುದಕ್ಕೆ ಬರಬೇಕಾದ ಅವರ ನಿಯಮಗಳು.
ಯಾಜಕರಲ್ಲಿ ಸಮಸ್ತ ಗಂಡಸರಿಗೂ, ಲೇವಿಯರಲ್ಲಿ ಲಿಖಿತರಾದ ಸಮಸ್ತರಿಗೂ ಪಾಲನ್ನು ಕೊಡುವುದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ವಂಶಾವಳಿಯ ದಾಖಲೆಯ ಪ್ರಕಾರ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
ಲೇವಿಯರು ತಮ್ಮ ಹುಲ್ಲುಗಾವಲು ಮತ್ತು ಆಸ್ತಿಯನ್ನು ತ್ಯಜಿಸಿ ಯೆಹೂದ ಮತ್ತು ಯೆರೂಸಲೇಮಿಗೆ ಬಂದರು, ಏಕೆಂದರೆ ಯಾರೊಬ್ಬಾಮನೂ ಅವನ ಮಕ್ಕಳು ಯೆಹೋವ ದೇವರಿಗೆ ಯಾಜಕ ಸೇವೆ ಮಾಡದ ಹಾಗೆ ತಿರಸ್ಕರಿಸಿದನು.
ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.
ಆರೋನನಿಗೂ ಅವನ ಪುತ್ರರಿಗೂ ಮುಂಡಾಸುಗಳನ್ನು ಇಟ್ಟು ನಡುಕಟ್ಟುಗಳನ್ನು ಕಟ್ಟಬೇಕು, ಅವರಿಗೆ ಹೀಗೆ ಅವರಿಗೆ ಯಾಜಕತ್ವ ಸೇವೆಯು ಶಾಶ್ವತ ಕಟ್ಟಳೆಯಾಗಿರುವುದು. “ಈ ರೀತಿಯಾಗಿ ಆರೋನನನ್ನೂ ಅವನ ಪುತ್ರರನ್ನೂ ನೀನು ಪ್ರತಿಷ್ಠೆ ಮಾಡಬೇಕು.