Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:16 - ಕನ್ನಡ ಸಮಕಾಲಿಕ ಅನುವಾದ

16 “ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನು ಅಲಕ್ಷ್ಯಮಾಡುವವನಾಗಿದ್ದಾನೆ; ನನ್ನನ್ನು ಅಲಕ್ಷ್ಯಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಅಲಕ್ಷ್ಯಮಾಡುವವನಾಗಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಅಪ್ನಾಚ್ಯಾ ಶಿಸಾಕ್ನಿ “ಜೆ ಕೊನ್ ತುಮ್ಕಾ ಆಯಿಕ್ತಾ, ತೊ ಮಾಕಾ ಆಯಿಕ್ತಾ; ಕೊನ್ ತುಮ್ಕಾ ಮರ್‍ಯಾದ್ ದಿ ನಾ, ತೊ ಮಾಕಾ ಮರ್‍ಯಾದ್ ದಿ ನಾ; ಅನಿ ಕೊನ್ ಮಾಕಾ ಮರ್‍ಯಾದ್ ದಿ ನಾ, ತೊ ಮಾಕಾ ಧಾಡಲ್ಲ್ಯಾಕ್‍ ಮರ್‍ಯಾದ್ ದಿ ನಾ”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:16
17 ತಿಳಿವುಗಳ ಹೋಲಿಕೆ  

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ.”


“ನಿಮ್ಮನ್ನು ಸ್ವಾಗತಿಸುವವರು ನನ್ನನ್ನು ಸ್ವಾಗತಿಸುತ್ತಾರೆ. ನನ್ನನ್ನು ಸ್ವಾಗತಿಸಿದವರು, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವಾಗತಿಸುತ್ತಾರೆ.


ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.


ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.


ಯೇಸು, ಕೂಗಿ ಹೇಳಿದ್ದೇನೆಂದರೆ, “ನನ್ನನ್ನು ನಂಬುವವರು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿಕೊಟ್ಟ ತಂದೆಯಲ್ಲಿಯೇ ವಿಶ್ವಾಸವಿಡುತ್ತಾರೆ.


“ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿದರೆ, ಅವನು ನನ್ನನ್ನು ಸ್ವೀಕರಿಸುತ್ತಾನೆ. ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ,” ಎಂದರು.


ಯಾರಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಂಡರೆ ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ.


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ,” ಎಂದು ನುಡಿದನು.


“ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು.


ಈ ಕಾರಣದಿಂದ ನೀನೂ, ನಿನ್ನ ಸಮಸ್ತ ಗುಂಪು ಯೆಹೋವ ದೇವರಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ. ನೀವು ಆರೋನನಿಗೆ ವಿರೋಧವಾಗಿ ಗೊಣಗುಟ್ಟುವುದು ಯಾಕೆ?” ಎಂದು ಹೇಳಿದನು.


ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?


ಬೆಳಿಗ್ಗೆ ಯೆಹೋವ ದೇವರ ಮಹಿಮೆಯನ್ನು ನೋಡುವಿರಿ. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ನೀವು ಗೊಣಗುಟ್ಟಿದ್ದನ್ನು ಅವರು ಕೇಳಿದ್ದಾರೆ. ನಮಗೆ ವಿರೋಧವಾಗಿ ನೀವು ಗೊಣಗುಟ್ಟುವ ಹಾಗೆ ನಾವು ಯಾರು?” ಎಂದರು.


ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, “ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು.


ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.


ನನ್ನ ದೇಹಸ್ಥಿತಿ ನಿಮಗೆ ಬೇಸರಗೊಳಿಸುವುದಾಗಿದ್ದರೂ ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸುವಿನಂತೆಯೂ ಸೇರಿಸಿಕೊಂಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು