Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:17 - ಕನ್ನಡ ಸಮಕಾಲಿಕ ಅನುವಾದ

17 ಆ ಎಪ್ಪತ್ತೆರಡು ಮಂದಿ ಸಂತೋಷದಿಂದ ಹಿಂತಿರುಗಿ, “ಕರ್ತದೇವರೇ, ನಿಮ್ಮ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು - ಸ್ವಾಮೀ, ದೆವ್ವಗಳು ಕೂಡಾ ನಿನ್ನ ಹೆಸರನ್ನು ಕೇಳಿ ನಮಗೆ ಅಧೀನವಾಗುತ್ತವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಪ್ಪತ್ತೆರಡು ಮಂದಿ ಶಿಷ್ಯರು ತಮ್ಮ ಪ್ರವಾಸದಿಂದ ಹಿಂತಿರುಗಿ ಬಂದಾಗ ಬಹಳ ಸಂತೋಷವಾಗಿದ್ದರು. ಅವರು ಯೇಸುವಿಗೆ, “ಪ್ರಭುವೇ, ನಾವು ನಿನ್ನ ಹೆಸರನ್ನು ಹೇಳಿದಾಗ ದೆವ್ವಗಳು ಸಹ ನಮಗೆ ವಿಧೇಯವಾದವು!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ಸತ್ತರಾರ್ ದೊಗೆ ಜಾನಾ ಲೈ ಕುಶಿ-ಕುಶಿನ್ ಪರ್ತುನ್ ಯೆಲ್ಯಾನಿ. ಅನಿ ಜೆಜುಕ್ “ಧನಿಯಾ, ತುಜೆ ನಾವ್ ಘೆವ್ನ್ ಅಮಿ ಗಿರ್‍ಯಾಕ್ನಿ ಸೈತ್ ಕಾಯ್ಬಿ ಸಾಂಗ್ಲ್ಯಾರ್, ತೆನಿ ಅಮಿ ಸಾಂಗಟಲ್ಲೆ ಆಯ್ಕಿತ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:17
8 ತಿಳಿವುಗಳ ಹೋಲಿಕೆ  

ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು.


ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,


ಇವುಗಳಾದ ಮೇಲೆ ಕರ್ತದೇವರು ಬೇರೆ ಎಪ್ಪತ್ತೆರಡು ಮಂದಿಯನ್ನು ಸಹ ನೇಮಿಸಿ ತಾವೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತಮಗೆ ಮುಂದಾಗಿ ಕಳುಹಿಸಿದರು.


ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿ, ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ,’ ಎಂದು ಹೇಳಿರಿ.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.


ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು