Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:27 - ಕನ್ನಡ ಸಮಕಾಲಿಕ ಅನುವಾದ

27 ಅದಕ್ಕೆ ಅವನು ಉತ್ತರವಾಗಿ, “ ‘ನೀನು ನಿನ್ನ ದೇವರಾದ ಕರ್ತದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು,’ ಮತ್ತು ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು,’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಆತ್ಮದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದಕ್ಕೆ ಅವನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಬುದ್ಧಿಯಿಂದಲೂ ಪ್ರೀತಿಸಬೇಕು. ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂದು ಬರೆದದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅದಕ್ಕೆ ಅವನು, “‘ನೀನು ನಿನ್ನ ಪ್ರಭುವಾದ ದೇವರನ್ನು ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ಮತ್ತು ಪೂರ್ಣಮನಸ್ಸಿನಿಂದ ಪ್ರೀತಿಸಬೇಕು’ ಮತ್ತು ‘ನೀನು ನಿನ್ನನ್ನು ಪ್ರೀತಿಸುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು’ ಎಂದು ಬರೆದಿದೆ” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತ್ಯಾ ಮಾನ್ಸಾನ್ “ಸಗ್ಳ್ಯಾ ತುಜ್ಯಾ ಕಾಳ್ಜಾನ್,ಸಗ್ಳ್ಯಾ ತುಜ್ಯಾ ಜಿವಾನಿ, ಸಗ್ಳ್ಯಾ ತುಜ್ಯಾ ತಾಕ್ತಿನ್, ಅನಿ ಸಗ್ಳ್ಯಾ ತುಜ್ಯಾ ಮನಾನ್; ಸರ್ವೆಸ್ವರಾ ತುಜ್ಯಾ ದೆವಾಚೊ ಪ್ರೆಮ್ ಕರ್, ಅನಿ ತಿಯಾ ತುಕಾಚ್ ಕಸೊ ಪ್ರೆಮ್ ಕರ್‍ತೆ, ತಸೆ ತುಜ್ಯಾ ಸೆಜಾರ್‍ಯಾಚೊಬಿ ಪ್ರೆಮ್ ಕರ್, ಮನುನ್ ಖಾಯ್ದ್ಯಾಚೆ ಪುಸ್ತಕ್ ಸಾಂಗ್ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:27
15 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,” ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಮಾತಿನಲ್ಲಿವೆ.


ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


“ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.


“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು!” ಎಂದು ಪವಿತ್ರ ವೇದದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಉತ್ತಮವಾದದ್ದನ್ನು ಮಾಡುವವರಾಗಿರುವಿರಿ.


ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ.


ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.


ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: ನಾನು ನನ್ನ ನಿಯಮಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,” ಎಂದು ಹೇಳಿದರು.


ಇಸ್ರಾಯೇಲರೇ, ಕೇಳಿರಿ: ದೇವರಾದ ಯೆಹೋವ ನಮ್ಮ ದೇವರು; ಯೆಹೋವ ದೇವರು ಒಬ್ಬರೇ.


ಯೇಸು ಅವನಿಗೆ, “ಮೋಶೆಯ ನಿಯಮದಲ್ಲಿ ಏನು ಬರೆದಿದೆ? ನೀನು ಅದನ್ನು ಹೇಗೆ ಓದುತ್ತೀ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು