Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:42 - ಕನ್ನಡ ಸಮಕಾಲಿಕ ಅನುವಾದ

42 ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಒಂದೇ ಒಂದು ಮುಖ್ಯವಾದದ್ದು. ಮರಿಯಳು ಮಾಡಿದ ಆಯ್ಕೆ ಸರಿಯಾದದ್ದು. ಆಕೆಯಿಂದ ಅದು ಎಂದಿಗೂ ತೆಗೆಯಲ್ಪಡುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಖರೆ, ಮರಿನ್ ಲೈ ಬರೆ ಹೊತ್ತೆ ಎಚುನ್ ಕಾಡ್ಲಿನಾಯ್, ಅನಿ ತೆ ಕೊನಾಕ್ಬಿ ತಿಚೆಕ್ನಾ ಕಾಡುನ್ ಘೆವ್ಕ್ ಹೊಯ್ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:42
36 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ಪರಲೋಕದಲ್ಲಿ ನನಗೆ ನೀವಲ್ಲದೆ ಮತ್ಯಾರಿದ್ದಾರೆ? ಇಹಲೋಕದಲ್ಲಿ ನಿಮ್ಮನ್ನಲ್ಲದೆ ಇನ್ನಾರನ್ನೂ ನಾನು ಬಯಸುವುದಿಲ್ಲ.


ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು?


ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: “ನೀವು ನನ್ನ ಆಶ್ರಯವೂ, ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.”


ನಾನು ಜೀವ ಮರಣವನ್ನೂ, ಆಶೀರ್ವಾದ ಶಾಪವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆಂಬುದಕ್ಕೆ ಆಕಾಶವನ್ನೂ, ಭೂಮಿಯನ್ನೂ ಈ ಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ಆದುದರಿಂದ ನೀವೂ, ನಿಮ್ಮ ಸಂತತಿಯೂ, ಬದುಕಿ ಬಾಳುವಂತೆ ಜೀವವನ್ನೇ ಆಯ್ದುಕೊಳ್ಳಿರಿ.


ನಂಬಿಗಸ್ತಿಕೆಯ ಮಾರ್ಗವನ್ನು ಆರಿಸಿಕೊಂಡಿದ್ದೇನೆ; ನಾನು ನಿಮ್ಮ ನಿಯಮಗಳ ಮೇಲೆ ನನ್ನ ಹೃದಯವನ್ನಿಟ್ಟುಕೊಂಡಿದ್ದೇನೆ.


ಆದ್ದರಿಂದ ನೀವು ಕೇಳುವ ವಿಷಯಗಳಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು; ಇಲ್ಲದವರ ಕಡೆಯಿಂದ ತಮಗಿದೆ ಎಂದುಕೊಳ್ಳುವುದನ್ನು ಸಹ, ಅವರಿಂದ ಕಿತ್ತುಕೊಳ್ಳಲಾಗುವುದು,” ಎಂದು ಹೇಳಿದರು.


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು.


ನಿಮ್ಮ ಶಾಸನಗಳನ್ನು ನಿತ್ಯ ಸೊತ್ತಾಗಿ ತೆಗೆದುಕೊಂಡಿದ್ದೇನೆ; ಏಕೆಂದರೆ ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿದೆ.


ನಾನು ನನ್ನ ಎಲ್ಲಾ ಆಸ್ತಿಯನ್ನು ದಾನಮಾಡಿದರೂ, ನಾನು ಹೊಗಳಿಕೊಳ್ಳುವಂತೆ ನನ್ನ ದೇಹವನ್ನು ಸುಡುವುದಕ್ಕಾಗಿ ಒಪ್ಪಿಸಿಕೊಟ್ಟರೂ ಪ್ರೀತಿಯು ನನಗಿಲ್ಲದಿದ್ದರೆ, ನನಗೇನೂ ಪ್ರಯೋಜನವಾಗುವುದಿಲ್ಲ.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


“ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ.


ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸುವುದಕ್ಕೆ ಅವರನ್ನು ಆಯ್ದುಕೊಂಡಿರುವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ,” ಎಂದನು. ಅದಕ್ಕವರು, “ಹೌದು, ನಾವೇ ಸಾಕ್ಷಿಗಳಾಗಿದ್ದೇವೆ,” ಎಂದರು.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ನಾನು ನಿಮ್ಮ ಸೂತ್ರಗಳನ್ನು ಆರಿಸಿಕೊಂಡಿರುವುದರಿಂದ, ನಿಮ್ಮ ಕೈ ನನಗೆ ನೆರವಾಗಲಿ.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಆಗ ಐಶ್ವರ್ಯವಂತನು ಆ ನಿರ್ವಾಹಕನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವುದು? ನಿನ್ನ ಲೆಕ್ಕವನ್ನು ಒಪ್ಪಿಸು. ನೀನು ಇನ್ನು ಮೇಲೆ ನಿರ್ವಾಹಕನಾಗಿರಲು ಆಗಲ್ಲ,’ ಎಂದನು.


ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು, ಆಕೆಯು ಕರ್ತದೇವರ ಪಾದಗಳ ಬಳಿಯಲ್ಲಿ ಕುಳಿತು ಅವರ ವಾಕ್ಯವನ್ನು ಕೇಳುತ್ತಿದ್ದಳು.


ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದ ಮೇಲೆ, ಅವರ ಶಿಷ್ಯರಲ್ಲಿ ಒಬ್ಬನು ಅವರಿಗೆ, “ಕರ್ತದೇವರೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆಮಾಡುವುದಕ್ಕೆ ಕಲಿಸಿರಿ,” ಎಂದು ಕೇಳಿದನು.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ಮರಿಯಳ ಮತ್ತು ಆಕೆಯ ಸಹೋದರಿಯಾದ ಮಾರ್ಥಳ ಊರಾದ ಬೇಥಾನ್ಯದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.


ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು.


ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ತೈಲವನ್ನು ಸುಮಾರು ಅರ್ಧ ಲೀಟರಿನಷ್ಟು ತಂದು ಯೇಸುವಿನ ಪಾದಕ್ಕೆ ಸುರಿದು ತನ್ನ ತಲೆಯ ಕೂದಲಿನಿಂದ ಅವರ ಪಾದಗಳನ್ನು ಒರೆಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು