Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:34 - ಕನ್ನಡ ಸಮಕಾಲಿಕ ಅನುವಾದ

34 ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ. ಆದ್ದರಿಂದ ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು. ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವು ಸಹ ಕತ್ತಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ನಿನ್ನ ಕಣ್ಣೇ ದೇಹಕ್ಕೆ ದೀಪ; ನಿನ್ನ ಕಣ್ಣು ಸರಿಯಿದ್ದರೆ ನಿನ್ನ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ, ದೇಹವೆಲ್ಲಾ ಕತ್ತಲೆಮಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ; ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವದು. ಆದದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಿನ್ನ ಕಣ್ಣು ದೇಹಕ್ಕೆ ಬೆಳಕಾಗಿದೆ, ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣ ಬೆಳಕಾಗಿರುವುದು. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣಕತ್ತಲಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತುಮ್ಚೆ ಡೊಳೆ ತುಮ್ಚ್ಯಾ ಆಂಗಾಚೆ ದಿವೆ. ಕನ್ನಾ ತುಜೆ ಡೊಳೆ ಸಮಾ ಹಾತ್ ತನ್ನಾ ತುಜ್ಯಾ ಸಗ್ಳ್ಯಾ ಆಂಗಾಕ್ ಉಜ್ವೊಡ್ ರ್‍ಹಾತಾ.ಕನ್ನಾ ತುಮ್ಚೆ ಡೊಳೆ ಸಮಾ ನಾತ್, ತನ್ನಾ ತುಮ್ಚೆ ಸಗ್ಳೆ ಆಂಗುಚ್ ಕಾಳ್ಕಾತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:34
28 ತಿಳಿವುಗಳ ಹೋಲಿಕೆ  

ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ನಿಮ್ಮ ನಿಯಮದೊಳಗಿನ ಅದ್ಭುತಗಳನ್ನು ಕಾಣುವಂತೆ ನನ್ನ ಕಣ್ಣುಗಳನ್ನು ತೆರೆಯಿರಿ.


ಸೇವಕರೇ, ಭೂಮಿಯಲ್ಲಿ ನಿಮ್ಮ ಯಜಮಾನರಾಗಿರುವವರು ನೋಡುತ್ತಿರುವಾಗ ಮಾತ್ರ ಸೇವೆ ಮಾಡುವವರಾಗದೆ, ಕರ್ತ ಯೇಸುವಿಗೆ ಭಯಪಡುವವರಾಗಿ ಸರಳ ಹೃದಯದಿಂದ ಕೆಲಸಮಾಡಿ, ಅವರಿಗೆ ವಿಧೇಯರಾಗಿರಿ.


ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.


ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.


ಈ ಕಾರಣದಿಂದ, “ ‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’” ಎಂದರು.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಕಣ್ಣುಗಳಿದ್ದೂ ನೀವು ಕಾಣುವುದಿಲ್ಲವೋ? ಕಿವಿಗಳಿದ್ದೂ ನೀವು ಕೇಳುವುದಿಲ್ಲವೋ?


ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ.


ಇಗೋ ಕರ್ತದೇವರ ಹಸ್ತ ನಿನಗೆ ವಿರೋಧವಾಗಿದೆ. ಈಗ ನೀನು ಕುರುಡನಾಗಿ, ಸ್ವಲ್ಪ ಕಾಲ ಸೂರ್ಯನ ಬೆಳಕನ್ನು ಕಾಣದೇ ಹೋಗುವೆ,” ಎಂದನು. ತಕ್ಷಣವೇ ಅವನ ಮೇಲೆ ಮಂಜು ಮುಸುಕಿ ಕತ್ತಲೆ ಆವರಿಸಿತು. ಅವನು ತಡವರಿಸುತ್ತಾ ತನ್ನನ್ನು ಯಾರಾದರೂ ಕೈಹಿಡಿದು ನಡೆಸುವರೋ ಎಂದು ಹುಡುಕಾಡಿದನು.


ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.


ತಮ್ಮ ಕಣ್ಣುಗಳಿಂದ ನೋಡದಂತೆಯೂ, ತಮ್ಮ ಕಿವಿಗಳಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗದಂತೆಯೂ ಈ ಜನರ ಹೃದಯವನ್ನು ಕಠಿಣಗೊಳಿಸಿ, ಅವರ ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣುಗಳನ್ನು ಮೊಬ್ಬಾಗಿಸು,” ಎಂದು ನನಗೆ ಹೇಳಿದರು.


ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.


ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ.


ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.


ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ.


ನನ್ನ ಸೇವಕನಲ್ಲದೆ ಕುರುಡನು ಯಾರು? ನಾನು ಕಳುಹಿಸಿದ ಸೇವಕನಲ್ಲದೆ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಯೆಹೋವ ದೇವರ ಸೇವಕನಂತೆ ಕುರುಡನು ಯಾರು?


ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.


ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು.


ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಇವೆಲ್ಲಾ ಪಾಪವೇ.


ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ!


ಆದ್ದರಿಂದ, ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು