Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:39 - ಕನ್ನಡ ಸಮಕಾಲಿಕ ಅನುವಾದ

39 ಆಗ ಕರ್ತದೇವರು ಅವನಿಗೆ, “ಫರಿಸಾಯರಾದ ನೀವು, ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆಗ ಯೇಸು, “ಫರಿಸಾಯರಾದ ನೀವು ಲೋಟ ಹಾಗೂ ಊಟದ ತಟ್ಟೆಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಲೋಭದಿಂದಲೂ ಕೆಡುಕಿನಿಂದಲೂ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಸ್ವಾವಿುಯು ಅವನಿಗೆ - ಫರಿಸಾಯರಾದ ನೀವು ಪಂಚಪಾತ್ರೆ ಬಟ್ಟಲು ಇವುಗಳ ಹೊರ ಭಾಗವನ್ನು ಶುಚಿಮಾಡುತ್ತೀರಿ ಸರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಪ್ರಭುವು (ಯೇಸು) ಅವನಿಗೆ ಹೇಳಿದ್ದೇನೆಂದರೆ: “ಫರಿಸಾಯರಾದ ನೀವು ಪಾತ್ರೆಯ ಮತ್ತು ಬಟ್ಟಲಿನ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ನಿಮ್ಮ ಒಳಭಾಗವು ಮೋಸದಿಂದಲೂ ಕೆಟ್ಟತನದಿಂದಲೂ ತುಂಬಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತನ್ನಾ ಜೆಜುನ್ ತುಮ್ಚಿ ವಾಟ್ಕಿ ಆಯ್ದಾನಾ ಪವಿತ್ರ್ ಹಾತ್, ಖರೆ ಭುತ್ತುರ್ನಾ ತುಮಿ ಸಗ್ಳೆ ಹಾಳ್ ಕರ್‍ತಲಿ, ಅನಿ ಬುರ್ಶಿ ಲೊಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:39
26 ತಿಳಿವುಗಳ ಹೋಲಿಕೆ  

ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.


ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ.


ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?


ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.


“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವವರು ಇದ್ದಾರೆ; ಆದರೆ ಅವರು ತಮ್ಮ ಕೊಳೆಯನ್ನು ತೊಳೆದುಕೊಂಡಿರುವುದಿಲ್ಲ.


ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.


ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು.


ಅವನು ಬಡವರ ಹಿತಚಿಂತನೆಯಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು, ಹಣದ ಚೀಲವನ್ನು ಇಟ್ಟುಕೊಂಡು ಅದರಲ್ಲಿ ಹಾಕಿದ್ದನ್ನು ಕದ್ದುಕೊಳ್ಳುತ್ತಿದ್ದನು. ಆದ್ದರಿಂದಲೇ ಇದನ್ನು ಹೇಳಿದನು.


ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ.


ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.


ಅವಳ ಪ್ರಮುಖರು ಗರ್ಜಿಸುವ ಸಿಂಹಗಳು. ಅವಳ ನ್ಯಾಯಾಧಿಪತಿಗಳು ಸಂಜೆಯ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ಅಲ್ಲಿಯ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ಪ್ರಾಣಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿದ್ದಾರೆ.


ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ.


ಹರಿದು ಬಿಡುವ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿತೆರೆದಿದ್ದಾರೆ.


ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ.


ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು.


ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.


ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು, ಬೆಳ್ಳಿಯ ಹೊದಿಕೆಯಿಂದ ಮುಚ್ಚಲ್ಪಟ್ಟ ಬೋಕಿಯಂತೆ ಇದೆ.


ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದ ಕ್ರಿಸ್ತನು ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ಕರ್ತದೇವರನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು