Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:42 - ಕನ್ನಡ ಸಮಕಾಲಿಕ ಅನುವಾದ

42 “ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅಯ್ಯೋ ಫರಿಸಾಯರೇ, ನೀವು ಮರುಗ ಸದಾಪು ಮುಂತಾದ ಸಕಲ ಪಲ್ಯಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ; ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಒತ್ತಟ್ಟಿಗೆ ಬಿಟ್ಟಿದ್ದೀರಿ; ಇವುಗಳನ್ನು ಮಾಡಬೇಕಾಗಿತ್ತು, ಅವುಗಳನ್ನೂ ಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಫಾರಿಜೆವಾನೊ ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ತುಮಿ ಧಾ ತ್ಲೊ ಎಕ್ ವಾಟೊ ಮಟ್ಲ್ಯಾರ್, ಪುದಿನಾ, ಅನಿ ಅಸ್ಲ್ಯಾ ತಸ್ಲ್ಯಾ ಬಾರಿ-ಬಾರಿಕ್ಲ್ಯಾ ಝಾಡಾಂಚ್ಯಾ ಪಿಕಾತ್ಲೊ ಸೈತ್ ವಾಟೊ ದೆವಾಕ್ ದಿತ್ಯಾಶಿ, ಖರೆ, ದುಸ್ರ್ಯಾಕ್ನಿ ಬರೆ ಕರ್‍ತಲ್ಯಾಕ್, ಅನಿ ದೆವಾಚೊ ಪ್ರೆಮ್ ಕರ್‍ತಲ್ಯಾಕ್, ತುಮಿ ತುಮ್ಚೆ ಧ್ಯಾನುಚ್ ದಿ ನಾ ಹೊಲ್ಯಾಶಿ. ದುಸ್ರ್ಯಾಕ್ನಿ ಬರೆ ಕರುಂಗೆತ್ ತುಮಿ, ಹೆ, ಅದ್ದಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:42
22 ತಿಳಿವುಗಳ ಹೋಲಿಕೆ  

“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪುದೀನ, ಸದಾಪು, ಜೀರಿಗೆಗಳ ದಶಮಭಾಗವನ್ನು ಸಲ್ಲಿಸುತ್ತೀರಿ. ಆದರೆ ನಿಯಮದ ನ್ಯಾಯನೀತಿ, ಕರುಣೆ, ನಂಬಿಕೆ ಎಂಬ ಈ ಪ್ರಮುಖವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗಳೊಂದಿಗೆ ಆ ಬೇರೆಯವುಗಳನ್ನು ಬಿಟ್ಟುಬಿಡದೆ ಮಾಡಬೇಕಾಗಿತ್ತು.


ನಾನು ವಾರಕ್ಕೆ ಎರಡು ಸಾರಿ ಉಪವಾಸ ಮಾಡುತ್ತೇನೆ. ನನಗಿರುವ ಎಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ,’ ಎಂದು ಹೇಳಿ ತನಗೆ ತಾನೇ ಪ್ರಾರ್ಥಿಸಿದನು.


ಒಬ್ಬನು, “ನಾನು ದೇವರನ್ನು ಪ್ರೀತಿಸುತ್ತೇನೆ,” ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು.


“ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ. “ಆದರೆ ನೀವು, ‘ಯಾವುದರಲ್ಲಿ ನಿನ್ನದನ್ನು ಕಳ್ಳತನ ಮಾಡಿದ್ದೇವೆ?’ ಎಂದು ಕೇಳುತ್ತೀರಿ. “ದಶಮಭಾಗ ಮತ್ತು ಅರ್ಪಣೆಗಳಲ್ಲಿಯೇ!


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಸುಣ್ಣ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ. ಆದರೆ ಒಳಗೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರುತ್ತವೆ.


ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ಆದರೆ ನಿಮ್ಮನ್ನು ಬಲ್ಲೆನು. ನಿಮ್ಮ ಹೃದಯದಲ್ಲಿ ದೇವರ ಪ್ರೀತಿ ಇಲ್ಲ.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.


ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನು ನಮ್ಮ ಕಾಣಿಕೆಗಳನ್ನೂ, ಸಕಲ ಮರಗಳ ಫಲವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ಲೇವಿಯರು ಒಕ್ಕಲುತನವಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವುದಕ್ಕೂ ಪ್ರಮಾಣ ಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು