Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:48 - ಕನ್ನಡ ಸಮಕಾಲಿಕ ಅನುವಾದ

48 ಇದರಿಂದ ನಿಜವಾಗಿಯೂ ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಒಪ್ಪಿಕೊಳ್ಳುವಂತೆ ಸಾಕ್ಷಿಕರಿಸುತ್ತೀರಿ; ಏಕೆಂದರೆ ಅವರು ನಿಜವಾಗಿಯೂ ಪ್ರವಾದಿಗಳನ್ನು ಕೊಂದರು, ನೀವೋ ಅವರ ಸಮಾಧಿಗಳನ್ನು ಕಟ್ಟುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಹೀಗಿರುವದರಿಂದ ನಿಮ್ಮ ಪಿತೃಗಳು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವದಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನೇ ಕಟ್ಟುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಇದರಿಂದಾಗಿ, ನಿಮ್ಮ ಪಿತೃಗಳು ಮಾಡಿದ ಕೃತ್ಯಗಳನ್ನು ನೀವು ಒಪ್ಪಿಕೊಂಡಿದ್ದೀರೆಂಬುದನ್ನು ಎಲ್ಲಾ ಜನರಿಗೆ ತೋರಿಸುತ್ತೀರಿ. ಅವರು ಪ್ರವಾದಿಗಳನ್ನು ಕೊಂದರು. ನೀವು ಆ ಪ್ರವಾದಿಗಳಿಗಾಗಿ ಗೋರಿಗಳನ್ನು ಕಟ್ಟುತ್ತೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಅಶೆ ತುಮಿ ತುಮ್ಚ್ಯಾ ಅದ್ಲ್ಯಾ ವಾಡ್ ವಡ್ಲಾನಿ ಕಾಯ್ ಕರ್‍ಲ್ಯಾನಿ ಮನುನ್ ತುಮಿಚ್ ದಾಕ್ವುನ್ ದಿವ್ಕ್ ಲಾಗ್ಲ್ಯಾಶಿ, ತೆನಿ ಪ್ರವಾದ್ಯಾಕ್ನಿ ಜಿವಾನಿ ಮಾರ್‍ಲ್ಯಾನಿ. ತುಮಿ ತೆಂಕಾ ಸಮಾದ್ಯಾ ಭಾಂದ್ಲ್ಯಾಶಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:48
14 ತಿಳಿವುಗಳ ಹೋಲಿಕೆ  

ನನ್ನ ಪ್ರಿಯರೇ, ಕರ್ತದೇವರ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯವಾಗಿ ಆದರ್ಶವಾಗಿ ಇಟ್ಟುಕೊಳ್ಳಿರಿ.


ಆದ್ದರಿಂದ ನೀವು ಆ ಪ್ರವಾದಿಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.


ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.


“ಆದರೂ ಇನ್ನೂ ನೀವು ಹೇಳುವುದೇನು? ‘ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲವೇ?’ ಎಂದು ಹೇಳುವಿರಿ. ಮಗನು ನ್ಯಾಯವನ್ನೂ, ನೀತಿಯನ್ನೂ ಮಾಡಿ, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.


ನಾನಲ್ಲ, ನಿನ್ನ ಬಾಯಿಯೇ ನಿನ್ನನ್ನು ಖಂಡಿಸುತ್ತದೆ; ಹೌದು, ನಿನ್ನ ತುಟಿಗಳೇ ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.


ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸುವುದಕ್ಕೆ ಅವರನ್ನು ಆಯ್ದುಕೊಂಡಿರುವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ,” ಎಂದನು. ಅದಕ್ಕವರು, “ಹೌದು, ನಾವೇ ಸಾಕ್ಷಿಗಳಾಗಿದ್ದೇವೆ,” ಎಂದರು.


ಹೀಗೆ ಅವರು ತಮ್ಮ ನಾಲಿಗೆಯಿಂದ ತಾವೇ ಎಡವಿ ಬೀಳುವಂತೆ ಮಾಡಿಕೊಳ್ಳುವರು. ಅವರನ್ನು ಕಾಣುವವರೆಲ್ಲರೂ ತಲೆಯಾಡಿಸಿ ಅಣಕಿಸುವರು.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಸುಣ್ಣ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ. ಆದರೆ ಒಳಗೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರುತ್ತವೆ.


“ನಿಮಗೆ ಕಷ್ಟ, ಏಕೆಂದರೆ ನಿಮ್ಮ ಪಿತೃಗಳು ಪ್ರವಾದಿಗಳನ್ನು ಕೊಂದರು, ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.


ಈ ಕಾರಣದಿಂದ, ದೇವರ ಜ್ಞಾನವು ಸಹ ಹೇಳಿರುವುದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸೆಪಡಿಸುವರು.’


ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು