Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:54 - ಕನ್ನಡ ಸಮಕಾಲಿಕ ಅನುವಾದ

54 ಏಕೆಂದರೆ ಯೇಸುವಿನ ಮಾತಿನಲ್ಲಿ ಏನನ್ನಾದರೂ ಕಂಡುಹಿಡಿದು ಅವರ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಅವರ ಮಾತಿನಲ್ಲಿ ಏನಾದರೂ ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಆತನ ಬಾಯಿಮಾತಿನಲ್ಲಿ ಏನಾದರೂ ಹಿಡಿಯಬೇಕೆಂದು ಆತನನ್ನು ಹೊಂಚಿನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಯೇಸುವನ್ನು ಮಾತಿನಲ್ಲಿ ಹಿಡಿಯಬೇಕೆಂದು ಯೋಚಿಸಿ, ಆತನು ಏನಾದರೂ ತಪ್ಪು ಹೇಳುವಂತೆ ಮಾಡಲು ಪ್ರಯತ್ನಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ಅನಿ ಜೆಜುಕ್ ಗೊಂದ್ಳುನ್ ಘಾಲುನ್, ತೆಕಾ ಧರುಕ್ ಮನುನ್ ಬಗುಲಾಗಲ್ಲೆ. ತೆನಿ ಕಾಯ್ ತರ್ ಚುಕ್ ಕರಿ ಸರ್ಕೆ ಕರುಕ್ ಖಟ್ಪಟುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:54
12 ತಿಳಿವುಗಳ ಹೋಲಿಕೆ  

ಆಮೇಲೆ ಅವರು ಯೇಸುವನ್ನು ಅವರ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಅವರ ಬಳಿಗೆ ಕಳುಹಿಸಿದರು.


ಅವರಲ್ಲಿ ಮೋಶೆಯ ನಿಯಮ ಬೋಧಕನಾಗಿದ್ದ ಒಬ್ಬನು, ಯೇಸುವನ್ನು ಪರೀಕ್ಷಿಸುವುದಕ್ಕಾಗಿ,


ಆಗ ಫರಿಸಾಯರು ಹೊರಟುಹೋಗಿ ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.


ಅವರು ಯೇಸುವನ್ನು ಹೊಂಚಿ ನೋಡುತ್ತಾ, ಮಾತಿನಲ್ಲಿ ಅವರನ್ನು ಸಿಕ್ಕಿಸುವಂತೆ ಅಧಿಪತಿಗೂ ಅಧಿಕಾರಕ್ಕೂ ಒಪ್ಪಿಸಿಕೊಡಲು, ನೀತಿವಂತರೆಂದು ನಟಿಸುವ ಗೂಢಚಾರರನ್ನು ಕಳುಹಿಸಿದರು.


ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು, ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಲಕ್ಷವಿಟ್ಟು ನೋಡುತ್ತಿದ್ದರು.


ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, “ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ?


ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.


ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ, ನಿಯಮ ಬೋಧಕರೂ ಫರಿಸಾಯರೂ ಕೋಪಾವೇಶವುಳ್ಳವರಾಗಿ, ಯೇಸು ಇನ್ನೂ ಹೆಚ್ಚು ವಿಷಯಗಳನ್ನು ಮಾತನಾಡುವಂತೆ ಅವರನ್ನು ಕೆಣಕಿದರು,


ಯೇಸು ಜನರ ಮುಂದೆ ಬಹಿರಂಗವಾಗಿ ಹೇಳಿದ ಮಾತಿನಲ್ಲಿ ಅವರು ತಪ್ಪು ಕಂಡುಹಿಡಿಯಲಾರದೆ ಹೋದರು. ಯೇಸುವಿನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಾದರು.


ನೀವು ಅವರ ಮಾತಿಗೆ ಒಪ್ಪಿಕೊಳ್ಳಬೇಡಿ, ಏಕೆಂದರೆ ನಾಲ್ವತ್ತಕ್ಕಿಂತಲೂ ಹೆಚ್ಚು ಜನರು ಅವನಿಗಾಗಿ ಹೊಂಚುಹಾಕಿದ್ದಾರೆ. ಅವನನ್ನು ಕೊಲ್ಲುವವರೆಗೆ ಊಟಮಾಡುವುದಿಲ್ಲ, ಪಾನ ಮಾಡುವುದಿಲ್ಲ, ಎಂದು ಅವರು ಶಪಥ ಮಾಡಿದ್ದಾರೆ. ಅವರ ಬೇಡಿಕೆಗೆ ನಿಮ್ಮ ಒಪ್ಪಿಗೆಯನ್ನೇ ಈಗ ಅವರು ಎದುರುನೋಡುತ್ತಾ ಇದ್ದಾರೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು