Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:1 - ಕನ್ನಡ ಸಮಕಾಲಿಕ ಅನುವಾದ

1 ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತ್ಯಾಚ್ ಎಳಾರ್ ಹಜಾರಾನ್ ಲೊಕಾಂಚೊ ತಾಂಡೊ ಥೈ ಗೊಳಾ ಹೊಲ್ಲೊ. ತೆಚೆಸಾಟ್ನಿ ತಿ ಲೊಕಾ ಎಕಾಮೆಕಾಕ್ನಿ ತುಡ್ವುನ್ ಘೆವ್‍ಲಾಗಲ್ಲಿ. ಜೆಜು ಅದ್ದಿ ಅಪ್ನಾಚ್ಯಾ ಶಿಸಾಕ್ನಿ “ಫಾರಿಜೆವಾಂಚ್ಯಾ ಇಸ್ಟಾಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ- ತಸೆ ಮಟ್ಲ್ಯಾರ್ ತೆಂಚ್ಯಾ ಕುಸ್ಡ್ಯಾಪಾನಾಚ್ಯಾ ವಿಶಯಾತ್ ಮಟ್ಲೊ ಮಿಯಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:1
18 ತಿಳಿವುಗಳ ಹೋಲಿಕೆ  

ಆದಕಾರಣ, ಎಲ್ಲಾ ದ್ವೇಷವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ಅಪವಾದಗಳನ್ನೂ ವಿಸರ್ಜಿಸಿರಿ.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ಕಪಟಿಗಳೇ! ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಈ ಕಾಲವನ್ನು ನೀವು ವಿವೇಚಿಸದಿರುವುದು ಹೇಗೆ?


“ಹೃದಯದಲ್ಲಿ ಭಕ್ತಿಹೀನರಾಗಿರುವವರು ಕೋಪವನ್ನು ಕೂಡಿಸುವರು; ದೇವರು ಅವರನ್ನು ಬಂಧಿಸಿದರೂ, ಅವರು ದೇವರಿಗೆ ಮೊರೆ ಇಡುವುದಿಲ್ಲ.


ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, ಅವನಿಗೆ ನಿರೀಕ್ಷೆ ಎಲ್ಲಿ?


ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.


ಆದರೆ ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಿಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ, ದೇವರ ಮನುಷ್ಯನು ಹೇಳಿದ್ದ ಪ್ರಕಾರವೇ ಜನರು ಆ ಅಧಿಕಾರಿಯನ್ನು ಪಟ್ಟಣದ ಬಾಗಿಲಲ್ಲಿ ತುಳಿದುಹಾಕಿದ್ದರಿಂದ ಅವನು ಮರಣಹೊಂದಿದನು.


ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,


ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.


“ನಿಮಗೆ ಕಷ್ಟ, ಏಕೆಂದರೆ ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ, ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು,” ಎಂದು ಹೇಳಿದರು.


ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ


ಆದರೂ ಯೇಸುವಿನ ವಿಷಯವು, ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ಅವರಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ದೊಡ್ಡ ಸಮೂಹಗಳು ಕೂಡಿ ಬಂದವು.


ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು