Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:14 - ಕನ್ನಡ ಸಮಕಾಲಿಕ ಅನುವಾದ

14 ಯೇಸು, “ಸ್ನೇಹಿತನೇ, ನಿಮ್ಮ ಮೇಲೆ ನ್ಯಾಯಾಧಿಪತಿಯಾಗಿ ಇಲ್ಲವೆ ನಿಮಗೆ ಭಾಗಮಾಡಿಕೊಡುವುದಕ್ಕೆ ನನ್ನನ್ನು ನೇಮಿಸಿದವರು ಯಾರು?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು - ಎಲಾ ಮನುಷ್ಯ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇವಿುಸಿದವರಾರು ಎಂದು ಅವನನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಯೇಸು ಅವನಿಗೆ, “ನಾನು ನಿಮ್ಮ ನ್ಯಾಯಾಧಿಪತಿ ಎಂದಾಗಲಿ ನಿಮ್ಮ ತಂದೆಯ ಆಸ್ತಿಯನ್ನು ನಿಮ್ಮಿಬ್ಬರಿಗೆ ಹಂಚಿಕೊಡುವವನು ಎಂದಾಗಲಿ ನಿನಗೆ ಯಾರು ಹೇಳಿದರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಜೆಜುನ್ “ಮಾಜ್ಯಾ ದೊಸ್ತಾ, ತುಮ್ಕಾ ನ್ಯಾಯ್ ಕರುನ್ ದಿವ್ಕ್ ಮಿಯಾ ಕೊನ್? ತುಮ್ಚಿ ಅಸ್ತಿ ವಾಟುನ್ ದಿತಲೊ ಅದಿಕಾರ್ ಮಾಕಾ ಕೊನ್ ದಿಲಾ” ಮನುನ್ ಜಬಾಬ್ ದಿಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:14
11 ತಿಳಿವುಗಳ ಹೋಲಿಕೆ  

ಮನುಷ್ಯನೇ, ಅಂಥವುಗಳನ್ನು ನಡೆಸುವವರ ಮೇಲೆ ತೀರ್ಪುಮಾಡುತ್ತಿರುವ ನೀನು ದೇವರ ತೀರ್ಪಿನಿಂದ ತಪ್ಪಿಸಿಕೊಂಡೇನೆಂದು ನೆನಸುತ್ತೀಯೋ?


ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?


ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.


ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು.


ಅದಕ್ಕೆ ಆಕೆಯು, “ಸ್ವಾಮಿ, ಯಾರೂ ಶಿಕ್ಷೆ ವಿಧಿಸಲಿಲ್ಲ,” ಎಂದಳು. ಯೇಸು ಆಕೆಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.


ಅವರು ಬಂದು ತನ್ನನ್ನು ಹಿಡಿದುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ಯೇಸು ತಿಳಿದು ತಾವೊಬ್ಬರೇ ಪುನಃ ಬೆಟ್ಟದ ಕಡೆಗೆ ಹೋದರು.


ಯೇಸು ಅವರ ವಿಶ್ವಾಸವನ್ನು ಕಂಡು ಅವನಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದು ಹೇಳಿದರು.


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಪೇತ್ರನನ್ನು ಕಂಡು, “ನೀನು ಸಹ ಅವರಲ್ಲಿ ಒಬ್ಬನು,” ಎಂದನು. ಅದಕ್ಕೆ ಪೇತ್ರನು, “ಇಲ್ಲಪ್ಪ, ನಾನಲ್ಲ,” ಎಂದನು.


ಗುಂಪಿನಲ್ಲಿದ್ದ ಒಬ್ಬನು ಯೇಸುವಿಗೆ, “ಬೋಧಕರೇ, ಆಸ್ತಿಯನ್ನು ಭಾಗಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು