Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:22 - ಕನ್ನಡ ಸಮಕಾಲಿಕ ಅನುವಾದ

22 ಯೇಸು ತಮ್ಮ ಶಿಷ್ಯರಿಗೆ: “ಆದಕಾರಣ, ನೀವು ನಿಮ್ಮ ಜೀವನಕ್ಕಾಗಿ ಏನು ಊಟಮಾಡಬೇಕು; ಮತ್ತು ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಲ್ಲದೆ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟಮಾಡಬೇಕು? ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು ತನ್ನ ಶಿಷ್ಯರಿಗೆ ಹೀಗೆ ಹೇಳಿದನು: “ಈ ಕಾರಣದಿಂದ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಪ್ರಾಣಧಾರಣೆಗೆ ಬೇಕಾದ ಊಟಕ್ಕಾಗಿ ಮತ್ತು ತೊಟ್ಟುಕೊಳ್ಳಲು ಬೇಕಾದ ಬಟ್ಟೆಗಾಗಿ ಚಿಂತಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಜೆಜು ಶಿಸಾಕ್ನಿ ಹೆಚ್ಯಾ ಸಾಟ್ನಿ ಮಿಯಾ ತುಮ್ಕಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಝಿತ್ತೆ ರ್‍ಹಾವ್‍ಸಾಟ್ನಿ ತುಮ್ಚ್ಯಾ ಜಿವಾಕ್ ಕಾಯ್ ಖಾತಲೆ, ನಾಹೊಲ್ಯಾರ್ ಆಂಗಾರ್ ಕಾಯ್ ನೆಸ್ತಲೆ ಮನುನ್ ಯವ್ಜನ್ ಕರುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:22
7 ತಿಳಿವುಗಳ ಹೋಲಿಕೆ  

ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ನೀವು ಚಿಂತೆ ಇಲ್ಲದೆ ಇರಬೇಕೆಂಬುದು ನನ್ನ ಇಷ್ಟ. ಮದುವೆ ಆಗದವನು ಕರ್ತ ಯೇಸುವನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತ ಯೇಸುವಿನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.


ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಡಬೇಡಿರಿ; ಚಿಂತೆಯೂ ಮಾಡಬೇಡಿರಿ.


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,


ಊಟಕ್ಕಿಂತ ಜೀವನವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು