Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:4 - ಕನ್ನಡ ಸಮಕಾಲಿಕ ಅನುವಾದ

4 “ನನ್ನ ಸ್ನೇಹಿತರೇ, ದೇಹವನ್ನು ಕೊಂದು, ಅದಕ್ಕಿಂತ ಹೆಚ್ಚೇನೂ ಮಾಡಲಾರದವರಿಗೆ ಹೆದರಬೇಡಿರಿ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ; ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ - ದೇಹವನ್ನು ಕೊಂದು ಅದಕ್ಕಿಂತ ಹೆಚ್ಚಿನದೇನೂ ಮಾಡಲಾರದವರಿಗೆ ಹೆದರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬಳಿಕ ಯೇಸು ಜನರಿಗೆ ಹೀಗೆಂದನು: “ಗೆಳೆಯರೇ, ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರಿಗೆ ಭಯಪಡಬೇಡಿ. ಅವರು ನಿಮ್ಮನ್ನು ಕೊಲ್ಲಬಹುದಷ್ಟೇ. ಆ ಬಳಿಕ ಬೇರೇನೂ ಮಾಡಲು ಅವರಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಾಜ್ಯಾ ದೊಸ್ತಾನೊ ಮಿಯಾ ತುಮ್ಕಾ ಸಾಂಗ್ತಾ, ಆಂಗಾಚೊ ಜಿವ್ ಕಾಡ್ತಲ್ಯಾಕ್ ಭಿಂವ್‍ನಕಾಶಿ, ತೆಚೆನ್ ಮೊಟೆ ಅನಿಕಾಯ್ಬಿ ತೆಕಾ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:4
20 ತಿಳಿವುಗಳ ಹೋಲಿಕೆ  

ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಿಯೂ ಅಂಜದೆ ಧೈರ್ಯದಿಂದಿರಿ. ನೀವು ಧೈರ್ಯದಿಂದಿರುವುದು, ಅವರ ವಿನಾಶಕ್ಕೂ, ನಿಮ್ಮ ರಕ್ಷಣೆಗೂ ದೇವರಿಂದಾದ ಸೂಚನೆಯಾಗಿದೆ.


ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.


ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.


ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.


“ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.


“ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆಯ್ದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


ಅವನ ಬಾಯಿ ಮಾತು ಬಹು ಮಧುರ. ಹೌದು, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಪುತ್ರಿಯರೇ, ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.


ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು.


ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು