Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:42 - ಕನ್ನಡ ಸಮಕಾಲಿಕ ಅನುವಾದ

42 ಕರ್ತದೇವರು ಹೇಳಿದ್ದೇನೆಂದರೆ, “ತಕ್ಕ ಕಾಲದಲ್ಲಿ ತನ್ನ ಸೇವಕರಿಗೆ ಅವರ ಪಾಲಿನ ಆಹಾರವನ್ನು ಕೊಡುವುದಕ್ಕಾಗಿ, ಅವರ ಯಜಮಾನನು ತನ್ನ ಮನೆಯ ಮೇಲೆ ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಆಡಳಿತಗಾರನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಸ್ವಾವಿು ಹೇಳಿದ್ದೇನಂದರೆ - ಹೊತ್ತುಹೊತ್ತಿಗೆ ಅಶನಕ್ಕೆ ಬೇಕಾದದ್ದನ್ನು ಅಳೆದು ಕೊಡುವದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇವಿುಸಿದ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೆವಾರ್ತೆಯವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತನ್ನಾ ಧನಿಯಾನ್ ಅಶೆ ಜಾಲ್ಯಾರ್ ವಿಶ್ವಾಸಾಚೊ ಅನಿ ಶಾನೊ ಆಳ್ ಕೊನ್? ತೊ ಕೊನ್‍ ಕಾಯ್ ಮಟ್ಲ್ಯಾರ್, ಜೆ ಕೊನಾಕ್, ಧನಿ, ಘರಾಚಿ ಸಗ್ಳಿ ಜವಾಬ್ದಾರಿ, ಅನಿ ಹುರಲ್ಲ್ಯಾ ಆಳಾಕ್ನಿ, ಸಮಾ ಎಳಾರ್ ಜೆವಾನ್ ವಾಟುನ್ ದಿವ್ಕ್ ಮನುನ್ ನೆಮ್ತಾ, ತೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:42
29 ತಿಳಿವುಗಳ ಹೋಲಿಕೆ  

ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ನೀವು ದೇವರಿಂದ ವಿವಿಧ ಕೃಪಾವರಗಳನ್ನು ಹೊಂದಿರಲಾಗಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿರುವ ವರಗಳನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ಏಕೆಂದರೆ ಸಭಾಧ್ಯಕ್ಷನು ದೇವರ ಕಾರ್ಯಭಾರವನ್ನು ಉಳ್ಳವನಾಗಿರುವುದರಿಂದ ನಿಂದಾರಹಿತನಾಗಿರಬೇಕು; ಅವನು ಗರ್ವಿಷ್ಠನೂ ಮುಂಗೋಪಿಯೂ ಮದ್ಯಪಾನ ಮಾಡುವವನೂ ಹೊಡೆದಾಡುವವನೂ ನೀಚಲಾಭವನ್ನು ಆಶಿಸುವವನೂ ಆಗಿರಬಾರದು.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


“ಸಂಜೆಯಾದಾಗ, ದ್ರಾಕ್ಷಿಯ ತೋಟದ ಯಜಮಾನನು ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನವರೆಗೆ ಕೂಲಿಯನ್ನು ಕೊಡು,’ ಎಂದು ಹೇಳಿದನು.


ನೀವು ಮೊಸರನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ನೀವು ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿಸುವುದಿಲ್ಲ.


ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.


ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ. ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು.


“ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು.” ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು.


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು.


ಇನ್ನೂ ಕತ್ತಲಿರುವಾಗಲೇ ಆಕೆಯು ಏಳುವಳು; ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು, ತನ್ನ ದಾಸಿಯರಿಗೆ ದಿನದ ಕೆಲಸವನ್ನು ಹಂಚುವಳು.


ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದ ಕ್ರಿಸ್ತನು ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ಕರ್ತದೇವರನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.


ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು.


ಆಗ ಪರಿಶುದ್ಧಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಮ್ಮ ತಮ್ಮ ಕೆಲಸವನ್ನು ಬಿಟ್ಟು ಬಂದು,


ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು; ವಕ್ರಹೃದಯವುಳ್ಳವನು ಕಡೆಗಣಿಸಲಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು