Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:48 - ಕನ್ನಡ ಸಮಕಾಲಿಕ ಅನುವಾದ

48 ದಂಡನೆಗೆ ಯೋಗ್ಯವಾದದ್ದನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳಿಗೆ ಗುರಿಯಾಗುವನು. ಯಾವನಿಗೆ ಹೆಚ್ಚು ಕೊಡಲಾಗಿದೆಯೋ, ಅವನಿಂದ ಹೆಚ್ಚು ಕೇಳಲಾಗುವುದು; ಯಾವನಿಗೆ ಹೆಚ್ಚಾಗಿ ಒಪ್ಪಿಸಿರುವುದೋ, ಅವನಿಂದ ಹೆಚ್ಚಾಗಿಯೇ ಕೇಳಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ತಿಳಿಯದೆ ಪೆಟ್ಟುಗಳಿಗೆ ಯೋಗ್ಯವಾದದ್ದನ್ನು ನಡಿಸಿದವನು ಸ್ವಲ್ಪ ಪೆಟ್ಟು ತಿನ್ನುವನು. ಯಾವನಿಗೆ ಬಹಳವಾಗಿ ಕೊಟ್ಟದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವದು; ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಅನಿ ಧನಿಯಾಸಾಟ್ನಿ ಕಾಯ್ ಕರ್‍ತಲೆ ಮನುನ್ ಗೊತ್ತ್ ನಸಲ್ಲೊ ಆಳ್ ರ್‍ಹಾತಾ, ಅನಿ ತೆನಿ ಕಾಯ್ಬಿ ಧನಿಯಾಕ್ ನಕ್ಕೊ ಹೊಲ್ಲಿ ಚುಕ್ ಕರ್ಲ್ಯಾರ್, ತೆಕಾ ಕಮಿ ಶಿಕ್ಷಾ ಗಾವ್ತಾ. ಕೊನಾಕ್ ಲೈ ದಿಲ್ಲೆ ಹಾಯ್, ತೆಚೆಕ್ನಾ ಜಾಸ್ತಿಚೆ ಫಾಟಿ ಯವ್ಕ್ ಪಾಜೆ; ಅನಿ ಕೊನಾಕ್ ಎಗ್ದಮ್ ಜಾಸ್ತಿಚೆ ದಿಲ್ಲೆ ಹಾಯ್, ತೆಚೆಕ್ನಾ ಎಗ್ದಮ್ ಜಾಸ್ತಿಚೆ ಫಾಟಿ ಪರ್ತುನ್ ಯೆವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:48
21 ತಿಳಿವುಗಳ ಹೋಲಿಕೆ  

ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.


“ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.


ನಾನು ಬಂದು ಅವರೊಂದಿಗೆ ಮಾತನಾಡದಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರ ಪಾಪದ ವಿಷಯವಾಗಿ ಅವರಿಗೆ ನೆಪವಿಲ್ಲ.


ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.”


ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು.


ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.


ಈ ಬೋಧನೆಯು ಭಾಗ್ಯವಂತರಾದ ದೇವರ ಮಹಿಮೆಯ ಸುವಾರ್ತೆಗೆ ಅನುರೂಪವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲಾಗಿದೆ.


ಆಗ ಐಶ್ವರ್ಯವಂತನು ಆ ನಿರ್ವಾಹಕನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವುದು? ನಿನ್ನ ಲೆಕ್ಕವನ್ನು ಒಪ್ಪಿಸು. ನೀನು ಇನ್ನು ಮೇಲೆ ನಿರ್ವಾಹಕನಾಗಿರಲು ಆಗಲ್ಲ,’ ಎಂದನು.


ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು.


ತಮ್ಮ ವಾಕ್ಯ ಸಾರುವುದರ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕರಾದ ದೇವರ ಆಜ್ಞೆಗನುಸಾರವಾಗಿ ನನಗೆ ಒಪ್ಪಿಸಿದರು.


“ ‘ಯಾವನಾದರೂ ಒಬ್ಬನು ತಿಳಿಯದೆ ಪಾಪ ಮಾಡುವುದಾದರೆ, ಪಾಪ ಪರಿಹಾರಕ ಬಲಿಗಾಗಿ ಒಂದು ವರ್ಷದ ಮೇಕೆಯನ್ನು ತರಬೇಕು.


ಅಪರಾಧಿಗೆ ಪೆಟ್ಟಿನ ಶಿಕ್ಷೆ ತಿರ್ಮಾನವಾದರೆ, ನ್ಯಾಯಾಧಿಪತಿ ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.


ಪೇತ್ರನು ಯೇಸುವಿಗೆ, “ಕರ್ತದೇವರೇ, ನೀವು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀರೋ ಅಥವಾ ಎಲ್ಲರಿಗೋ?” ಎಂದು ಕೇಳಿದನು.


“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವುದಕ್ಕಾಗಿ ಬಂದೆನು, ಅದು ಈಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ!


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ. ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ. ಆದ್ದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು