Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:5 - ಕನ್ನಡ ಸಮಕಾಲಿಕ ಅನುವಾದ

5 ಆದರೆ ಯಾರಿಗೆ ನೀವು ಭಯಪಡಬೇಕೆಂದು ನಾನು ನಿಮಗೆ ತೋರಿಸುತ್ತೇನೆ: ನಿಮ್ಮ ದೇಹವನ್ನು ಕೊಂದ ಮೇಲೆ, ನರಕದಲ್ಲಿ ಹಾಕುವುದಕ್ಕೆ ಅಧಿಕಾರವಿರುವ ದೇವರಿಗೆ ಭಯಪಡಿರಿ. ಹೌದು, ದೇವರಿಗೇ ಭಯಪಡಿರಿ, ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಯಾರಿಗೆ ಹೆದರಬೇಕೋ ನಿಮಗೆ ತಿಳಿಸುತ್ತೇನೆ; ಕೊಂದ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳವನಿಗೆ ಹೆದರಬೇಕು; ಹೌದು, ಆತನಿಗೇ ಹೆದರಬೇಕೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಕೊನಾಕ್ ಭಿಂವ್ಚೆ ಮನುನ್ ಮಿಯಾ ತುಮ್ಕಾ ಸಾಂಗ್ತಾ ಆಯ್ಕಾ ತುಮಿ ದೆವಾಕ್ ಭಿಂವಾ, ಜಿವಾನಿ ಮಾರಲ್ಲ್ಯಾ ಮಾನಾ ನರ್‍ಕಾತ್ ನ್ಹೆವ್ನ್ ಘಾಲ್ತಲೊ ಅದಿಕಾರ್ ತೆಕಾ ಹಾಯ್. ಮಾಜೆರ್ ವಿಶ್ವಾಸ್ ಕರಾ, ತುಮಿ ಭಿಂವ್ಕ್ ಪಾಜೆ ಹೊತ್ತೆ ತೆಕಾ ಎವ್ಡೆಚ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:5
16 ತಿಳಿವುಗಳ ಹೋಲಿಕೆ  

ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ಅವನು, “ನೀವು ದೇವರಿಗೆ ಭಯಪಟ್ಟು ಅವರಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಅವರು ನ್ಯಾಯತೀರ್ಪು ಮಾಡುವ ಸಮಯ ಬಂದಿದೆ. ಭೂಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದ ದೇವರನ್ನೇ ಆರಾಧಿಸಿರಿ!” ಎಂದು ಮಹಾಧ್ವನಿಯಿಂದ ಹೇಳಿದನು.


ಸಜೀವ ದೇವರ ಕೈಯಲ್ಲಿ ಬೀಳುವುದು ಭಯಂಕರವಾದದ್ದು.


ದುಷ್ಟರು ಪಾತಾಳಕ್ಕೆ ತಿರುಗುವರು, ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು.


ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ. ಆತನ ಮಕ್ಕಳಿಗೆ ಆಶ್ರಯವು ಇರುವುದು.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ನೀವು ನನಗೆ ಭಯಪಡುವುದಿಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಸಮ್ಮುಖದಲ್ಲಿ ನಡುಗುವುದಿಲ್ಲವೋ? ನಾನು ಮರಳನ್ನು ನಿತ್ಯ ನೇಮವಾಗಿ ಸಮುದ್ರಕ್ಕೆ, ಅದು ದಾಟಕೂಡದ ಹಾಗೆ ಮೇರೆಯಾಗಿಟ್ಟಿದ್ದೇನೆ. ಅದರ ತೆರೆಗಳು ಎದ್ದರೂ ದಡ ಮೀರಲಾರವು; ಘೋಷಿಸಿದರೂ ಅದನ್ನು ದಾಟಲಾರವು.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.


ಆದರೆ ನೀವು ಜಾಗರೂಕರಾಗಿರಿ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೆ ಹೇಳಿದ್ದೇನೆ.


ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು