Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:7 - ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಷ್ಟುಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ತಲೇಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಚ್ಯಾ ಟಕ್ಲ್ಯಾಚಿ ಕೆಸಾ ಸೈತ್ ಮೆಜುನ್ ಥವಲ್ಲಿ ಹಾತ್, ತೆಚೆಸಾಟ್ನಿ ಭಿಂವ್ನಕಾಶಿ,ತುಮಿ ಗುಬ್‍ಯಾಂಚ್ಯಾನ್ಕಿ ಲೈ ಕಿಮ್ತಿಚೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:7
10 ತಿಳಿವುಗಳ ಹೋಲಿಕೆ  

ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ?


ಆದರೆ ನಿಮ್ಮ ತಲೆ ಕೂದಲೊಂದಾದರೂ ನಾಶವಾಗುವುದಿಲ್ಲ.


ಆಕೆ, “ಹಾಗಾದರೆ ನನ್ನ ಮಗನು ಸಾಯದಂತೆ ನಾಶನಕ್ಕೆ ನಾಶನವನ್ನು ಕೂಡಿಸುವ ಸೇಡುತೀರಿಸುವವರನ್ನು ತಡೆಯಲು ಅರಸನು ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಲಿ,” ಎಂದಳು. ಅದಕ್ಕೆ ದಾವೀದನು, “ಯೆಹೋವ ದೇವರ ಜೀವದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ,” ಎಂದನು.


ಆದರೆ ಜನರು ಸೌಲನಿಗೆ, “ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆಯನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಎಂದಿಗೂ ಇಲ್ಲ. ಯೆಹೋವ ದೇವರ ಜೀವದಾಣೆ, ಇದನ್ನು ಅವನು ದೇವರ ಸಹಾಯದಿಂದ ಮಾಡಿದ್ದರಿಂದ, ಅವನ ಒಂದು ಕೂದಲು ನೆಲಕ್ಕೆ ಬೀಳಬಾರದು,” ಎಂದು ಹೇಳಿ ಯೋನಾತಾನನು ಸಾಯದ ಹಾಗೆ ಪ್ರಾಯಶ್ಚಿತ್ತವನ್ನು ಮಾಡಿ ಬಿಡಿಸಿಕೊಂಡರು.


ಆದ್ದರಿಂದ ಊಟಮಾಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕಾಗಿಯೇ. ನೀವು ಜೀವದಿಂದ ಉಳಿಯಬೇಕು. ಏಕೆಂದರೆ ನಿಮ್ಮ ತಲೆಕೂದಲು ಒಂದಾದರೂ ನಾಶವಾಗುವುದಿಲ್ಲ,” ಎಂದನು.


ನೀವು ನಿಮ್ಮ ಕೈಕೃತಿಗಳ ಮೇಲೆ ಅವನನ್ನು ಅಧಿಕಾರಿಯನ್ನಾಗಿ ಮಾಡಿ, ಸಮಸ್ತವನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ:


ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಮೌಲ್ಯವುಳ್ಳವನಾಗಿದ್ದಾನಲ್ಲವೇ? ಆದ್ದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವುದು ನ್ಯಾಯಸಮ್ಮತವಾಗಿದೆ!” ಎಂದು ಹೇಳಿದರು.


ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಬುದ್ಧಿಕಲಿಸಿಕೊಡುವ ದೇವರು ಎಲ್ಲಿ? ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುವ ದೇವರು ಎಲ್ಲಿ?’ ಎಂದು ಯಾರೂ ಹೇಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು