Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:21 - ಕನ್ನಡ ಸಮಕಾಲಿಕ ಅನುವಾದ

21 ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದು ಹುಳಿಹಿಟ್ಟಿನಂತೆ ಇದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದನ್ನು ಒಬ್ಬ ಹೆಂಗಸು ತಕ್ಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದು, ಸ್ತ್ರೀಯೊಬ್ಬಳು ರೊಟ್ಟಿಮಾಡುವುದಕ್ಕಾಗಿ ದೊಡ್ಡ ಪಾತ್ರೆಯೊಂದರಲ್ಲಿರುವ ಹಿಟ್ಟಿಗೆ ಬೆರೆಸುವ ಹುಳಿಯಂತಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲ ಉಬ್ಬಿಸುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆ, ಕಶೆ ಮಟ್ಲ್ಯಾರ್, ಎಕ್ ಬಾಯ್ಕೊಮನುಸ್ ಸೊಡೊ ಘೆತಾ, ಅನಿ ಲೈಶ್ಯಾ ಪಿಟ್ಟಾತ್ ಘಾಲುನ್ ಥವ್ತಾ, ಅನಿ ತೆ ಪಿಟ್ಟ್ ಸಗ್ಳೆ ಫುಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:21
13 ತಿಳಿವುಗಳ ಹೋಲಿಕೆ  

ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”


ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.


ನನ್ನಲ್ಲಿದ್ದು ಫಲವನ್ನು ಕೊಡದ ಪ್ರತಿಯೊಂದು ಕವಲುಬಳ್ಳಿಯನ್ನು ತಂದೆ ಮೇಲಕ್ಕೆ ಎತ್ತಿಡುವರು. ಆದರೆ ಫಲಕೊಡುವ ಪ್ರತಿಯೊಂದು ಕವಲುಬಳ್ಳಿಯು ಹೆಚ್ಚು ಫಲಕೊಡುವಂತೆ ಅದನ್ನು ಕತ್ತರಿಸಿ ಶುದ್ಧ ಮಾಡುತ್ತಾರೆ.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.


ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.


ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು; ಶುದ್ಧ ಕೈಗಳುಳ್ಳವರು ಬಲದಲ್ಲಿ ಬೆಳೆಯುತ್ತಾ ಇರುವರು.


ಪುನಃ ಯೇಸು, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು