ಲೂಕ 13:25 - ಕನ್ನಡ ಸಮಕಾಲಿಕ ಅನುವಾದ25 ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಮನೇಯಜಮಾನನು ಎದ್ದು ಕದಾ ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಕದತಟ್ಟಿ - ಸ್ವಾಮೀ, ನಮಗೆ ತೆರೆಯಿರಿ ಎಂದು ಹೇಳುವದಕ್ಕೆ ತೊಡಗುವಾಗ ಅವನು - ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ ಅಂದಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಘರಾಚೊ ಧನಿ ಉಟ್ತಾ, ಅನಿ ದಾರ್ ಧಾಪ್ತಾ; ತನ್ನಾ ತಿಯಾ ಭಾಯ್ರ್ ಇಬೆ ರ್‍ಹಾವ್ನ್ ದಾರ್ ಬಡ್ವುನ್ “ಧನಿಯಾ ಮಾಕಾ ದಾರ್ ಕಾಡ್” ಮನುನ್ ಇಚಾರ್ಲ್ಯಾರ್. ತನ್ನಾ ತೊ “ತುಮಿ ಖೈತ್ನಾ ಯೆಲ್ಯಾಶಿ ಮನುನ್ ಮಾಕಾ ಗೊತ್ತ್ ನಾ!” ಮನ್ತಾ. ಅಧ್ಯಾಯವನ್ನು ನೋಡಿ |