Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:4 - ಕನ್ನಡ ಸಮಕಾಲಿಕ ಅನುವಾದ

4 ಇಲ್ಲವೆ ಸಿಲೋವ ಎಂಬಲ್ಲಿ ಗೋಪುರವು ಬಿದ್ದು ಸತ್ತು ಹೋದ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ದೋಷಿಗಳೆಂದು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸಿತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಲ್ಲವೆ ಸಿಲೊವಾವಿುನಲ್ಲಿ ಬುರುಜುಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಅಪರಾಧಿಗಳೆಂದು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ, ಸತ್ತುಹೋದ ಹದಿನೆಂಟು ಮಂದಿಯ ಕುರಿತು ನಿಮ್ಮ ಅಭಿಪ್ರಾಯವೇನು? ಜೆರುಸಲೇಮಿನಲ್ಲಿ ವಾಸವಾಗಿದ್ದ ಇತರರೆಲ್ಲರಿಗಿಂತಲೂ ಅವರು ಹೆಚ್ಚು ಪಾಪಿಗಳಾಗಿದ್ದರೆಂದು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಎಕ್ ಲಾಂಬ್, ಉಪ್ಪರ್ಲೆ ಭಾಂದಾಪ್ ಕೊಸ್ಳುನ್ ಪಡುನ್ ಸಿಲೊಆಮಾತ್ ಮರಲ್ಲ್ಯಾ ಅಟ್ರಾ ಲೊಕಾಂಚ್ಯಾ ವಿಶಯಾತ್ ತುಮಿ ಕಾಯ್ ಮನ್ತ್ಯಾಶಿ? ಜೆರುಜಲೆಮಾತ್ಲ್ಯಾ ಹುರಲ್ಲ್ಯಾ ಲೊಕಾಂಚ್ಯಾನ್ಕಿ, ತೆನಿ ಲೈ ಪಾಪಿ ಲೊಕಾ ಮನುನ್ ಯೆವಜ್ಲ್ಯಾಶಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:4
13 ತಿಳಿವುಗಳ ಹೋಲಿಕೆ  

ಬುಗ್ಗೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ನಾಡೊಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್, ಇವನು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಮಾಳಿಗೆಯನ್ನು ಹಾಕಿ, ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ದಾವೀದನ ನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.


ಇದ್ದಕ್ಕಿದ್ದಂತೆ ಮರುಭೂಮಿ ಕಡೆಯಿಂದ ದೊಡ್ಡ ಗಾಳಿ ಬೀಸಿ, ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು. ಮನೆಯು ಯೌವನಸ್ಥರ ಮೇಲೆ ಬಿತ್ತು, ಅವರು ಸತ್ತುಹೋದರು. ನಾನೊಬ್ಬನು ಮಾತ್ರ, ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ,’ ಎಂದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು, ನನಗೆ ದೃಷ್ಟಿ ಬಂತು,” ಎಂದನು.


ಅವನಿಗೆ, “ಹೋಗು, ಸಿಲೋವ ಕೊಳದಲ್ಲಿ ತೊಳೆದುಕೋ,” ಎಂದರು. ಸಿಲೋವ ಎಂದರೆ, “ಕಳುಹಿಸಲಾದವನು” ಎಂದರ್ಥ. ಕುರುಡನು ಹೋಗಿ ಕಣ್ಣು ತೊಳೆದುಕೊಂಡು ದೃಷ್ಟಿಹೊಂದಿದವನಾಗಿ ಬಂದನು.


ಅವನು ಲೆಕ್ಕ ತೆಗೆದುಕೊಳ್ಳಲು ಪ್ರಾರಂಭಿಸಿದಾಗ, ಹತ್ತು ಕೋಟಿ ಚಿನ್ನದ ನಾಣ್ಯಗಳ ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.


ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ, ನಮ್ಮ ಸಾಲಗಳನ್ನು ಕ್ಷಮಿಸಿರಿ.


ನಮಗೆ ಪಾಪಮಾಡಿದವರನ್ನು, ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಯೊಳಗೆ ಸೇರಿಸದೆ, ಕೇಡಿನಿಂದ ನಮ್ಮನ್ನು ತಪ್ಪಿಸಿ.”


ಮಿಕ್ಕಾದವರು ಅಫೇಕೆಂಬ ಪಟ್ಟಣದೊಳಗೆ ಓಡಿಹೋದರು. ಅಲ್ಲಿ ಒಂದು ಗೋಡೆ ಉಳಿದುಕೊಂಡವರಲ್ಲಿ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿದ್ದಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.


“ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ ರೆಮಲ್ಯನ ಮಗನನ್ನೂ ನೆಚ್ಚಿಕೊಂಡು ಮೆರೆದಿದ್ದರಿಂದ,


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ, ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ.


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.


ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು