ಲೂಕ 13:6 - ಕನ್ನಡ ಸಮಕಾಲಿಕ ಅನುವಾದ6 ಅನಂತರ ಯೇಸು ಈ ಸಾಮ್ಯವನ್ನು ಹೇಳಿದರು: “ಒಬ್ಬ ಮನುಷ್ಯನಿಗೆ ತನ್ನ ದ್ರಾಕ್ಷಿಯ ತೋಟದಲ್ಲಿ ನೆಡಲಾಗಿದ್ದ, ಒಂದು ಅಂಜೂರದ ಮರವಿತ್ತು. ಅವನು ಬಂದು ಅದರಲ್ಲಿ ಫಲವನ್ನು ಹುಡುಕಲು ಒಂದೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅನಂತರ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: “ಒಬ್ಬನು ತನ್ನ ದ್ರಾಕ್ಷಿತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದ. ಒಮ್ಮೆ ಅವನು ಬಂದು ಅದರಲ್ಲಿ ಹಣ್ಣನ್ನು ಹುಡುಕಲು ಒಂದೂ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಮೇಲೆ ಆತನು ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಒಬ್ಬಾನೊಬ್ಬನು ತನ್ನ ದ್ರಾಕ್ಷೆಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದ್ದನು. ತರುವಾಯ ಅವನು ಅದರಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು, ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬನು ತನ್ನ ತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದನು. ಒಮ್ಮೆ ಅವನು ಆ ಮರ ಹಣ್ಣು ಫಲಿಸಿರಬಹುದೆಂದು ಅಲ್ಲಿಗೆ ಬಂದನು. ಆದರೆ ಅವನು ಅದರಲ್ಲಿ ಒಂದು ಹಣ್ಣನ್ನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತನ್ನಾ ಜೆಜುನ್ ತೆಂಕಾ, ಹಿ ಕಾನಿ ಸಾಂಗಟ್ಲ್ಯಾನ್. “ಎಕ್ ಮಾನ್ಸಾಚ್ಯಾ ದ್ರಾಕ್ಷಿಚ್ಯಾ ಮಳ್ಯಾತ್ ಎಕ್ ಅಂಜುರಾಚೆ ಝಾಡ್ ಹೊತ್ತೆ. ತೊ ತ್ಯಾ ಝಾಡಾಕ್ ಅಂಜುರಾಚಿ ಫಳಾ ಹುಡ್ಕುಕ್ ಗೆಲೊ, ತನ್ನಾ ತೆಂಕಾ ಎಕ್‍ಬಿ ಫಳ್ ಗಾವುಕ್ನಾ”. ಅಧ್ಯಾಯವನ್ನು ನೋಡಿ |