Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:13 - ಕನ್ನಡ ಸಮಕಾಲಿಕ ಅನುವಾದ

13 ಆದರೆ ನೀನು ಔತಣಮಾಡಿಸಿದಾಗ, ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಆಹ್ವಾನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ನೀನು ಔತಣ ಮಾಡಿಸುವಾಗ ಬಡವರು ಊನವಾದವರು ಕುಂಟರು ಕುರುಡರು ಇಂಥವರನ್ನು ಕರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದರ ಬದಲು, ನೀನು ಔತಣ ಮಾಡಿಸುವಾಗ ಬಡಜನರನ್ನು, ಕುಂಟರನ್ನು ಮತ್ತು ಕುರುಡರನ್ನು ಆಮಂತ್ರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಿಯಾ ಮೊಟೆ ಸನಾಚೆ ಜೆವಾನ್‍ ಥವ್ತಾನಾ, ಅದು ಅಸಲ್ಲ್ಯಾಕ್ನಿ, ಗರಿಬಾಕ್ನಿ, ಸೊಟ್ಟ್ಯಾಕ್ನಿ, ಅನಿ ಕುಡ್ಡ್ಯಾಕ್ನಿ, ಬಾಗುನ್‍ ಗೆಲ್ಲ್ಯಾಕ್ನಿ, ಬಲ್ವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:13
34 ತಿಳಿವುಗಳ ಹೋಲಿಕೆ  

“ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಲು, ಆ ಮನೆಯಜಮಾನನು ಕೋಪಗೊಂಡು ತನ್ನ ಸೇವಕನಿಗೆ, ‘ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ, ಬಡವರನ್ನೂ ಊನವಾದವರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿ ಕರೆದುಕೊಂಡು ಬಾ,’ ಎಂದನು.


ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ದಬ್ಬಾಳಿಕೆಗೆ ಒಳಗಾದವನ ಪ್ರಾಣವನ್ನು ತೃಪ್ತಿಪಡಿಸಿದರೆ, ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವುದು. ನಿನ್ನ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.


ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.


ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?


ಪರಕೀಯರಿಗೆ ಸತ್ಕಾರ ಮಾಡುವುದನ್ನು ಅಲಕ್ಷ್ಯ ಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರ ಮೂಲಕ, ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ಆಗ ಆ ಸೇವಕರು ಮುಖ್ಯ ಬೀದಿಗಳಿಗೆ ಹೋಗಿ ತಾವು ಕಂಡ ಕೆಟ್ಟವರನ್ನೂ ಒಳ್ಳೆಯವರನ್ನೂ ಕರೆತಂದರು. ಹೀಗೆ ಮದುವೆ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.


ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಂದೆತಾಯಿ ಇಲ್ಲದವರೂ ಹಾಗೂ ವಿಧವೆಯರೂ ಸಂಭ್ರಮದಿಂದಿರಬೇಕು.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು.


ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.


ಸಾಯುತ್ತಿದ್ದವರ ಆಶೀರ್ವಾದವು ನನ್ನ ಮೇಲೆ ಬರುತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ಮಾಡುತ್ತಿದ್ದೆನು.


ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು.


ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು.


ನೆರೆದುಬಂದ ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಆದರೆ, ಅವನು ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಸ್ವಯಂನಿಯಂತ್ರವುಳ್ಳವನೂ ನ್ಯಾಯವಂತನೂ ಪರಿಶುದ್ಧನೂ ಶಿಸ್ತುಳ್ಳವನಾಗಿರಬೇಕು.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಉತ್ತೇಜನವಾದ್ದರಿಂದ, ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಆನಂದವೂ ಆದರಣೆಯೂ ಉಂಟಾದವು.


ಅವರೊಂದಿಗೆ ಪೇತ್ರನು ಹೊರಟನು. ಅವನು ಬಂದಾಗ ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರು ಅವನ ಸುತ್ತಲೂ ನಿಂತುಕೊಂಡು ದೊರ್ಕಳು ಜೀವದಿಂದ ಇದ್ದಾಗ ಆಕೆ ಸಿದ್ಧಪಡಿಸಿದ ನಿಲುವಂಗಿಗಳನ್ನು ಇತರ ಬಟ್ಟೆಗಳನ್ನು ಅವನಿಗೆ ತೋರಿಸುತ್ತಾ ಕಣ್ಣೀರಿಟ್ಟರು.


ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.


ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.


ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು, ಕುರುಡರನ್ನು, ಮೂಕರನ್ನು, ಊನವಾದವರನ್ನು ಮತ್ತು ಬೇರೆ ಅನೇಕ ರೋಗಿಗಳನ್ನು ತಮ್ಮೊಂದಿಗೆ ಕರೆದುಕೊಂಡು ಬಂದು ಯೇಸುವಿನ ಪಾದದ ಬಳಿಯಲ್ಲಿ ಬಿಟ್ಟರು. ಯೇಸು ಅವರನ್ನೆಲ್ಲಾ ಸ್ವಸ್ಥಪಡಿಸಿದರು.


ಯೇಸು ತಮ್ಮನ್ನು ಆಹ್ವಾನಿಸಿದವನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ರಾತ್ರಿಯ ಊಟಕ್ಕೆ ಸಿದ್ಧಪಡಿಸಿದಾಗ, ನಿನ್ನ ಸ್ನೇಹಿತರನ್ನಾಗಲಿ ನಿನ್ನ ಸಹೋದರ ಸಹೋದರಿಯನ್ನಾಗಲಿ, ನಿನ್ನ ಬಂಧುಗಳನ್ನಾಗಲಿ, ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ, ಏಕೆಂದರೆ ಅವರೂ ಪ್ರತಿಯಾಗಿ ನಿನ್ನನ್ನೂ ಆಹ್ವಾನಿಸಬಹುದು ಮತ್ತು ನಿನಗೆ ಪ್ರತ್ಯುಪಕಾರವಾದೀತು.


ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು