Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:26 - ಕನ್ನಡ ಸಮಕಾಲಿಕ ಅನುವಾದ

26 “ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ತಾಯಿ ಹೆಂಡತಿ ಮಕ್ಕಳು ಅಣ್ಣತಮ್ಮಂದಿರು ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಾಜ್ಯಾ ವಾಂಗ್ಡಾ ಯೆತಲೊ ಹರ್ ಎಕ್ಲೊ, ಅಪ್ನಾಚ್ಯಾ ಬಾಬಾಚ್ಯಾನ್ಕಿ, ಬಾಯ್ಚ್ಯಾನ್ಕಿ, ಬಾಯ್ಕೊ ಅನಿ ಪೊರಾಚ್ಯಾನ್ಕಿ, ಭಾವಾ ಭೆನಿಯಾಂಚ್ಯಾನ್ಕಿ, ಅನಿ ಅಪ್ನಾಚ್ಯಾನ್ಕಿ ಜಾಸ್ತಿ ಜೆ ಕೊನ್ ಮಾಜೊ ಪ್ರೆಮ್ ಕರಿನಾ ತೊ ಮಾಜೊ ಶಿಸ್ ಹೊವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:26
18 ತಿಳಿವುಗಳ ಹೋಲಿಕೆ  

“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು.


ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಅವನು ತನ್ನ ತಂದೆತಾಯಿಗಳ ಬಗ್ಗೆ, ‘ಅವರಿಗಾಗಿ ನನಗೆ ಗೌರವವಿಲ್ಲ.’ ಅವನು ತನ್ನ ಸಹೋದರರನ್ನೂ ಗುರುತಿಸಲಿಲ್ಲ ತನ್ನ ಸ್ವಂತ ಮಕ್ಕಳನ್ನೂ ಅರಿಯಲಿಲ್ಲ, ಏಕೆಂದರೆ ಅವನು ನಿಮ್ಮ ವಾಕ್ಯವನ್ನು ಕೈಗೊಂಡು ನಿಮ್ಮ ಒಡಂಬಡಿಕೆಯನ್ನು ಕಾಪಾಡಿದ್ದಾನೆ.


ಇದಕ್ಕನುಸಾರವಾಗಿ, “ಯಾಕೋಬನನ್ನು ನಾನು ಪ್ರೀತಿಸಿದೆನು, ಆದರೆ ಏಸಾವನನ್ನು ಹಗೆ ಮಾಡಿದೆನು,” ಎಂದು ಬರೆದಿರುತ್ತದೆ.


ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯರಿದ್ದು, ಒಬ್ಬಳನ್ನು ಪ್ರೀತಿಸುತ್ತಲೂ, ಮತ್ತೊಬ್ಬಳನ್ನು ದ್ವೇಷಿಸುತ್ತಲೂ ಇದ್ದರೆ, ಅವರಿಬ್ಬರೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ, ಚೊಚ್ಚಲು ಮಗನು ತಿರಸ್ಕಾರ ಹೊಂದುತ್ತಿರುವ ಹೆಂಡತಿಯಲ್ಲಿಯೇ ಹುಟ್ಟಿದ್ದರೆ,


ದೊಡ್ಡ ಜನಸಮೂಹವು ಯೇಸುವಿನ ಸಂಗಡ ಹೋಗುತ್ತಿರಲು, ಯೇಸು ತಿರುಗಿಕೊಂಡು ಅವರನ್ನು ನೋಡಿ ಹೇಳಿದ್ದೇನೆಂದರೆ:


ಆಗ ಅವನು ಅವನಿಗೆ, “ನಾನು ಬರುವುದಿಲ್ಲ. ನನ್ನ ದೇಶಕ್ಕೂ ನನ್ನ ಬಂಧುಗಳ ಬಳಿಗೂ ನಾನು ಹೋಗುತ್ತೇನೆ,” ಎಂದನು.


ನಾನು ಪೂರ್ಣ ದ್ವೇಷದಿಂದ ಅವರನ್ನು ಹಗೆಮಾಡುತ್ತೇನೆ; ನಾನು ಅವರನ್ನು ನನ್ನ ಶತ್ರುಗಳಂತೆ ಪರಿಗಣಿಸುತ್ತೇನೆ.


“ಮತ್ತೊಬ್ಬನು, ‘ನಾನು ಮದುವೆ ಮಾಡಿಕೊಂಡಿದ್ದೇನೆ, ಆದ್ದರಿಂದ ಬರಲಾರೆ,’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು