ಲೂಕ 15:13 - ಕನ್ನಡ ಸಮಕಾಲಿಕ ಅನುವಾದ13 “ಕೆಲವೇ ದಿನಗಳಲ್ಲಿ, ಕಿರಿಯ ಮಗನು ಎಲ್ಲವನ್ನೂ ಕೂಡಿಸಿಕೊಂಡು, ದೂರದೇಶಕ್ಕೆ ಪ್ರಯಾಣಮಾಡಿ, ಅಲ್ಲಿ ದುಂದು ವೆಚ್ಚದ ಜೀವನ ಮಾಡಿ ತನ್ನ ಆಸ್ತಿಯನ್ನು ಹಾಳು ಮಾಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸ್ವಲ್ಪ ದಿವಸದ ಮೇಲೆ ಆ ಕಿರೀಮಗನು ಎಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟು ಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಸೂರೆಮಾಡಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಆಗ ಕಿರಿಮಗನು ತನಗೆ ದೊರೆತ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿದನು. ಅಲ್ಲಿ ಅವನು ಪಟಿಂಗನಾಗಿ ಬದುಕಿ ತನ್ನ ಹಣವನ್ನೆಲ್ಲಾ ಹಾಳುಮಾಡಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಉಲ್ಲಿ ದಿಸಾ ಗೆಲ್ಲ್ಯಾ ಮಾನಾ, ಧಾಕ್ಲ್ಯಾ ಲೆಕಾನ್, ಅಪ್ನಾಚ್ಯಾ ವಾಟ್ಯಾಚಿ ಆಸ್ತಿ ಇಕ್ಲ್ಯಾನ್ ಅನಿ ಪೈಸೆ ಘೆವ್ನ್ ತೊ ಘರ್ ಸೊಡುನ್ ಎಕ್ ಧುರ್‍ಲ್ಯಾ ದೆಸಾಕ್ ಗೆಲೊ ಅನಿ ಫಿಡ್ಲೊ ಇಚಾರ್ ಕರಿನಸ್ತಾನಾ ಸಗ್ಳೆ ಪೈಸೆ ಮಜ್ಯಾ ಮಾರುನ್ ಖರಚ್ಲ್ಯಾನ್. ಅಧ್ಯಾಯವನ್ನು ನೋಡಿ |