Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:16 - ಕನ್ನಡ ಸಮಕಾಲಿಕ ಅನುವಾದ

16 ಅವನು ಹಂದಿಗಳು ತಿನ್ನುತ್ತಿದ್ದ ಸಿಪ್ಪೆಗಳಿಂದಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಕ್ಕೆ ಆಶೆಪಟ್ಟನು, ಆದರೆ ಅದನ್ನು ಸಹ ಅವನಿಗೆ ಯಾರೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಿಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದ. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಶೆಪಟ್ಟನು; ಆದರೂ ಯಾರೂ ಅವನಿಗೆ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಅವನು ಬಹಳ ಹಸಿವೆಗೊಂಡಿದ್ದನು. ಆದ್ದರಿಂದ ಹಂದಿಗಳು ತಿನ್ನುತ್ತಿದ್ದ ಕಾಯಿಗಳನ್ನೇ ತಿನ್ನಲು ಹಂಬಲಿಸಿದನು. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆನಿ ಡುಕ್ರಾನಿ ಖಾತಲೆ ಗಡ್ಡೆ ತರ್ ಬಿ ಖಾವ್ನ್, ಮಿಯಾ ಮಾಜೆ ಪೊಟ್ ಭರುನ್ ಘೆತಾ, ಮನುನ್ ಯವಜ್ಲ್ಯಾನ್, ಖರೆ, ಕೊನ್ಬಿ ತೆಕಾ ಕಾಯ್ಬಿ ಖಾವ್ಕ್ ದಿವ್ಕನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:16
13 ತಿಳಿವುಗಳ ಹೋಲಿಕೆ  

ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ.


ರುಚಿಯಾದವುಗಳನ್ನು ಒಮ್ಮೆ ತಿಂದವರು ಬೀದಿಗಳಲ್ಲಿ ಹಾಳಾಗಿದ್ದಾರೆ. ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ತೊಡುತ್ತಿದ್ದವರು, ತಿಪ್ಪೆಗಳಲ್ಲಿ ಬಿದ್ದುಕೊಂಡಿದ್ದಾರೆ.


ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.


ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ.


“ಆದರೆ ನೀವು ಮಾಟಗಾತಿಯ ಮಕ್ಕಳೇ, ವೇಶ್ಯೆ ಮತ್ತು ವ್ಯಭಿಚಾರಿಗಳ ಸಂತಾನದವರೇ, ಇಲ್ಲಿಗೆ ಬನ್ನಿರಿ.


ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!


ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿಮ್ಮ ಮುಂದೆ ಪಶುವಿನಂತೆ ಇದ್ದೆನು.


“ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಆಗ ಅವನು ಹೋಗಿ ಆ ದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿಕೊಂಡನು, ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.


“ಆಗ ಅವನಿಗೆ ಬುದ್ಧಿ ಬಂದು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿಯೂ ಉಳಿಯುವಷ್ಟು ಆಹಾರವಿದೆಯಲ್ಲಾ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ!


ಪೊದೆಗಳಲ್ಲಿನ ಉಪ್ಪಿನ ಸೊಪ್ಪು ಸಂಗ್ರಹಿಸುತ್ತಿದ್ದರು. ಜಾಲಿಯ ಬೇರುಗಳೇ ಅವರ ಆಹಾರವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು