Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:24 - ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ಈ ನನ್ನ ಮಗನು ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ,’ ಎಂದು ಹೇಳಿದನು. ಹೀಗೆ ಅವರು ಅವನ ಬರುವಿಕೆಯನ್ನು ಆಚರಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. ಆಗ ಅವರು ಉಲ್ಲಾಸಪಡುವದಕ್ಕೆ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೋ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಮರಲ್ಲೊ ಮಾಜೊ ಲೆಕ್ ಝಿತ್ತೊ ಹೊವ್ನ್ ಯೆಲಾ; ಕಳ್ದುನ್ ಗೆಲ್ಲೊ ತೊ ಅತ್ತಾ ಗಾವ್ಲಾ” ಮಟ್ಲ್ಯಾನ್. ಅಶೆ ತೆಂಚಿ ಗರ್‍ದಿ ಚಾಲು ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:24
34 ತಿಳಿವುಗಳ ಹೋಲಿಕೆ  

ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.


ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


ನಿಮ್ಮ ಪಾಪಗಳಿಂದಲೂ ನಿಮ್ಮ ಸುನ್ನತಿಯಿಲ್ಲದ ಪಾಪ ಸ್ವಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತ ಯೇಸುವಿನೊಂದಿಗೆ ಜೀವಿತರನ್ನಾಗಿ ಮಾಡಿ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದರು.


ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.


ನೀವು ನಿಮ್ಮ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಹಿಂದೊಮ್ಮೆ ಸತ್ತವರಾಗಿದ್ದೀರಿ.


“ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದುಕೊಂಡರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲಿ ಬಿಟ್ಟು ಕಳೆದುಹೋದ ಆ ಒಂದು ಕುರಿ ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದಿರುವನೇ?


ಆದರೆ ಈ ನಿನ್ನ ತಮ್ಮ ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಉಲ್ಲಾಸಪಟ್ಟು ಆನಂದಪಡುವುದು ಯುಕ್ತವಾದದ್ದೇ ಎಂದು ಹೇಳಿದನು.’ ”


ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.


ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.


ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.


ಏಕೆಂದರೆ ಇಸ್ರಾಯೇಲರನ್ನು ತ್ಯಜಿಸುವುದರಿಂದ ಜಗತ್ತು ದೇವರೊಡನೆ ಸಂಧಾನವಾಗುವುದಾದರೆ, ಅವರನ್ನು ಸ್ವೀಕರಿಸುವುದು, ಸತ್ತವರು ಜೀವಿತರಾಗಿ ಎದ್ದು ಬಂದಂತಾಗಿರುವುದಲ್ಲವೇ?


ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.


ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ.


ಯೇಸು ಬೇತ್ಸಾಯಿದಕ್ಕೆ ಬಂದಾಗ, ಕೆಲವರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.


ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.


“ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ.


ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ


ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವುದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವುದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡಲಾರದು.


ಕೊನೆಗೆ ಇಸ್ರಾಯೇಲನು, “ನನ್ನ ಮಗ ಯೋಸೇಫನು ಇನ್ನೂ ಜೀವಂತವಾಗಿದ್ದಾನೆ, ಅಷ್ಟೇ ಸಾಕು! ನಾನು ಸಾಯುವುದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.


ಆಕೆಯ ಸಾಂತ್ವನ ಸ್ತನವನ್ನು ಕುಡಿದು ನೀವು ತೃಪ್ತಿಯಾಗಿರುವಿರಿ. ನೀವು ಕುಡಿಯುವಿರಿ ಮತ್ತು ಅದರ ಸಮೃದ್ಧಿಯು ನಿಮ್ಮ ಸಂತೋಷಕ್ಕೆ ಕಾರಣವಾಗಿದೆ.”


ಆದರೆ ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ,” ಎಂದು ಹೇಳಿದರು.


ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ, ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು,” ಎಂದರು.


ಇದಲ್ಲದೆ ವಿಶೇಷ ಆಹಾರವನ್ನು ತಂದು ಕೊಯ್ದು ವಿಶೇಷ ಔತಣವನ್ನು ಬೇಗ ಸಿದ್ಧಮಾಡಿರಿ. ನಾವು ಉಂಡು ಸಂತೋಷಪಡೋಣ.


“ಆಗ, ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿದ್ದಾಗ, ನರ್ತನವನ್ನೂ ವಾದ್ಯವನ್ನೂ ಕೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು