ಲೂಕ 15:4 - ಕನ್ನಡ ಸಮಕಾಲಿಕ ಅನುವಾದ4 “ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದುಕೊಂಡರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲಿ ಬಿಟ್ಟು ಕಳೆದುಹೋದ ಆ ಒಂದು ಕುರಿ ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದಿರುವನೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದೇನಂದರೆ - ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದು ಹೋದರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳಿವೆ ಎಂದು ತಿಳಿದುಕೊಳ್ಳೋಣ. ಆ ಕುರಿಗಳಲ್ಲಿ ಒಂದು ಕಳೆದುಹೋದರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಅಲ್ಲೇ ಬಿಟ್ಟು ಕಳೆದುಹೋದ ಒಂದು ಕುರಿಗೋಸ್ಕರ ಹುಡುಕುತ್ತಾ ಹೋಗುವನು. ಆ ಕುರಿಯು ಸಿಕ್ಕುವ ತನಕ ಅವನು ಅದಕ್ಕಾಗಿ ಹುಡುಕುತ್ತಲೇ ಇರುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 “ತುಮ್ಚ್ಯಾತ್ಲ್ಯಾ ಎಕ್ಲ್ಯಾಕ್ಡೆ ಸೆಂಬರ್ ಬಕ್ರಿ ಹಾತ್ ಮನುವಾ, ಅನಿ ತ್ಯಾತುರ್‍ಲೆ ಎಕ್ ಬಕ್ರೆ ಕಳದ್ಲೆ ತರ್ ತೊ ಕಾಯ್ ಕರ್‍ತಾ? ತ್ಯಾ ನ್ಹವದಾರ್ ನ್ಹವ್ ಬಕ್ರ್ಯಾಕ್ನಿ ಥಯ್ಚ್ ಸೊಡುನ್, ಕಳ್ದುನ್ ಗೆಲ್ಲ್ಯಾ ಎಕುಚ್ಎಕ್ ಬಕ್ರ್ಯಾಕ್, ಗಾವಿ ಪತರ್ ಹುಡ್ಕುಕ್ ಜಾತಾ”. ಅಧ್ಯಾಯವನ್ನು ನೋಡಿ |