Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:16 - ಕನ್ನಡ ಸಮಕಾಲಿಕ ಅನುವಾದ

16 “ಮೋಶೆಯ ನಿಯಮವೂ ಪ್ರವಾದನೆಗಳೂ ಯೋಹಾನನವರೆಗೆ ಇದ್ದವು. ಅಂದಿನಿಂದ, ದೇವರ ರಾಜ್ಯವು ಸಾರಲಾಗಿದೆ. ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಧರ್ಮಶಾಸ್ತ್ರ ಹಾಗೂ ಪ್ರವಾದನೆಗಳ ಪರಿಣಾಮ ಯೊವಾನ್ನನ ಕಾಲದವರೆಗೆ ಮಾತ್ರ. ಅನಂತರ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಲಾಗುತ್ತಿದೆ. ಸರ್ವರೂ ಈ ರಾಜ್ಯದೊಳಕ್ಕೆ ಒತ್ತರಿಸಿಕೊಂಡು ನುಗ್ಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಈಚೆಗೆ ದೇವರ ರಾಜ್ಯವು ಸಾರಲ್ಪಡುತ್ತಾ ಇದೆ. ಅದರಲ್ಲಿ ಸಕಲರೂ ಬಲಾತ್ಕಾರವಾಗಿ ನುಗ್ಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಜನರು ಮೋಶೆಯ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಗ್ರಂಥಗಳಿಗೂ ಅನುಸಾರವಾಗಿ ಜೀವಿಸಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಸ್ನಾನಿಕನಾದ ಯೋಹಾನನು ಬಂದ ಕಾಲದಿಂದ ದೇವರ ರಾಜ್ಯದ ಸುವಾರ್ತೆಯು ತಿಳಿಸಲ್ಪಡುತ್ತಿದೆ. ಅನೇಕ ಜನರು ದೇವರ ರಾಜ್ಯದೊಳಗೆ ಹೋಗಲು ಬಹಳ ಪ್ರಯಾಸಪಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ಜುವಾಂವ್ ಬಾವ್ತಿಸಾಚ್ಯಾ ಕಾಲ್ ಸಗೊಳ್, ಮೊಯ್ಜೆಚೆ ಖಾಯ್ದೆ, ಅನಿ ಪ್ರವಾದ್ಯಾನಿ ಲಿವಲ್ಲ್ಯಾ ಗೊಸ್ಟಿಯಾಂಚ್ಯಾ ಪರ್‍ಕಾರ್ ಚಲ್ತಲೆ ಮನುನ್ ಹೊತ್ತೆ; ಖರೆ ಥೈತ್ನಾ ಹಿಕ್ಡಿನ್, ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗುನ್ ಹೊವ್ಲಾ, ಅನಿ ಸಗ್ಳೆ ಜಾನಾ ತ್ಯಾತುರ್ ಗುಸುಕ್ ಖಟ್‍ಪಟುಲ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:16
21 ತಿಳಿವುಗಳ ಹೋಲಿಕೆ  

ಏಕೆಂದರೆ ಯೋಹಾನನು ನೀತಿ ಮಾರ್ಗದೊಡನೆ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಅವನನ್ನು ನಂಬಿದರು. ನೀವು ಇದನ್ನು ಕಂಡ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.”


ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.


“ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”


“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.


ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.


“ಅದಕ್ಕೆ ಅಬ್ರಹಾಮನು ಅವನಿಗೆ, ‘ಅವರಿಗೆ ಮೋಶೆಯ ಮತ್ತು ಪ್ರವಾದಿಗಳ ಗ್ರಂಥಗಳಿವೆ; ಅದರಲ್ಲಿರುವುದಕ್ಕೆ ಅವರು ಕಿವಿಗೊಡಲಿ,’ ಎಂದನು.


‘ನಮ್ಮ ಪಾದಗಳಿಗೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ. ಆದರೂ ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ,’ ಎಂದು ಹೇಳಿರಿ.


ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿ, ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ,’ ಎಂದು ಹೇಳಿರಿ.


ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.


ಶಿಷ್ಯರು ದೇವರ ರಾಜ್ಯವನ್ನು ಸಾರುವುದಕ್ಕೂ ರೋಗಿಗಳನ್ನು ಸ್ವಸ್ಥಮಾಡುವುದಕ್ಕೂ ಯೇಸು ಅವರನ್ನು ಕಳುಹಿಸಿಕೊಟ್ಟರು.


ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:


ನೀವು ಹೋಗುತ್ತಾ, ‘ಪರಲೋಕ ರಾಜ್ಯವು ಸಮೀಪವಾಯಿತು,’ ಎಂದು ಸಾರಿ ಹೇಳಿರಿ.


ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.


ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.


ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ, ಆದರೆ ಬಾಯೊಳಗಿಂದ ಹೊರಗೆ ಬರುವಂಥದ್ದೇ ಮನುಷ್ಯನನ್ನು ಅಶುದ್ಧ ಮಾಡುತ್ತದೆ,” ಎಂದು ಹೇಳಿದರು.


ಏಕೆಂದರೆ ಕೆಲವೊಮ್ಮೆ ದೇವದೂತನು ಇಳಿದುಬಂದು ನೀರನ್ನು ಕಲಕುತ್ತಿದ್ದನು. ನೀರು ಕಲಕಿದೊಡನೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಅದು ಗುಣವಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು