Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:19 - ಕನ್ನಡ ಸಮಕಾಲಿಕ ಅನುವಾದ

19 ಅನಂತರ ಯೇಸು ಹೀಗೆ ಒಂದು ಸಾಮ್ಯ ಹೇಳಿದರು, “ಬಹು ಬೆಲೆಬಾಳುವ ಹಾಗೂ ನಯವಾದ ನಾರುಮಡಿ ವಸ್ತ್ರಗಳನ್ನೂ ಧರಿಸಿಕೊಂಡು ಪ್ರತಿದಿನವೂ ಭೋಗಗಳಲ್ಲಿಯೂ ಆಡಂಭರದಲ್ಲಿಯೂ ಬಾಳುತ್ತಿದ್ದ ಒಬ್ಬ ಧನವಂತನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೇಸು ಹೀಗೆಂದನು: “ಒಬ್ಬ ಐಶ್ವರ್ಯವಂತನಿದ್ದನು. ಅವನು ಯಾವಾಗಲೂ ಉತ್ತಮವಾದ ಉಡುಪುಗಳನ್ನು ಧರಿಸುತ್ತಿದ್ದನು. ಅವನು ಬಹಳ ಐಶ್ವರ್ಯವಂತನಾಗಿದ್ದುದರಿಂದ ಪ್ರತಿದಿನವೂ ವೈಭವದೊಡನೆ ಊಟಮಾಡುತ್ತಾ ಸಂತೋಷಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾನಾ ಜೆಜುನ್, “ಎಗ್ದಾ ಎಕ್ ಸಾವ್ಕಾರ್ ಮಾನುಸ್ ಹೊತ್ತೊ. ತೊ ಎಗ್ದಮ್ ಲೈ ಕಿಮ್ತಿಚೆ ಕಪ್ಡೆ ನೆಸಿ, ಅನಿ ಸದ್ದಿಚ್ ಎಗ್ದಮ್ ಆರಾಮಾಚೆ ಜಿವನ್ ತೊ ಕರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:19
23 ತಿಳಿವುಗಳ ಹೋಲಿಕೆ  

“ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.


ಈಜಿಪ್ಟಿನ ಕಸೂತಿಯ ನಾರುಮಡಿಯಿಂದ ನಿನ್ನ ಪಟವನ್ನು ಮಾಡಿದರು ಮತ್ತು ಅದು ನಿನ್ನ ಧ್ವಜವಾಗಿತ್ತು. ನಿಮ್ಮ ಮೇಲ್ಕಟ್ಟುಗಳು ಎಲೀಷ ಕರಾವಳಿಯಿಂದ ನೀಲಿ ಮತ್ತು ನೇರಳೆ ಬಣ್ಣದ್ದಾಗಿದ್ದವು.


“ ‘ಅಯ್ಯೋ! ಅಯ್ಯೋ! ಶೋಕಭರಿತ ಮಹಾನಗರಿಯೇ, ನೀನು ನೇರಳೆ, ಕಡುಗೆಂಪು ನಾರುಮಡಿಯನ್ನು ಧರಿಸಿ, ಚಿನ್ನ, ಬೆಲೆಬಾಳುವ ಕಲ್ಲು ಮತ್ತು ಮುತ್ತುಗಳಿಂದ ಬೆಳಗುತ್ತಿದ್ದೆ.


ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.


ಆ ಸ್ತ್ರೀಯು ನೇರಳೆ ಮತ್ತು ಕಡುಗೆಂಪು ಬಣ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ, ಅಮೂಲ್ಯವಾದ ಹರಳು, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದ ವಸ್ತುಗಳಿಂದಲೂ ಮತ್ತು ತನ್ನ ಅಶುದ್ಧ ಅನೈತಿಕತೆಯಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.


ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದು: “ಒಬ್ಬ ಐಶ್ವರ್ಯವಂತನಿದ್ದನು, ಅವನಿಗಿದ್ದ ಒಬ್ಬ ನಿರ್ವಾಹಕನು ಅವನ ಸರಕುಗಳನ್ನು ಹಾಳು ಮಾಡುತ್ತಿದ್ದಾನೆಂದು ಅವನಿಗೆ ಯಾರೋ ದೂರು ಹೇಳಿದರು.


ಅವರು ಯೇಸುವಿಗೆ ಕಡುಗೆಂಪು ಬಣ್ಣದ ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಯ ಮೇಲೆ ಇಟ್ಟರು.


ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ, ನಿನ್ನ ಆಹಾರವು ನಯವಾದ ಹಿಟ್ಟು, ಜೇನು, ಎಣ್ಣೆ ತಿನ್ನುತ್ತಿದ್ದೆ. ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.


ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.


ಆಭರಣಗಳೂ, ಕಂಠಮಾಲೆಗಳೂ, ಮಿದ್ಯಾನರ ಅರಸರು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ, ಅವರ ಒಂಟೆಗಳ ಕೊರಳೊಳಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದುಕೊಂಡ ಬಂಗಾರದ ಓಲೆಗಳ ತೂಕವು ಇಪ್ಪತ್ತು ಕಿಲೋಗ್ರಾಂ ತೂಕವಾಗಿತ್ತು.


“ಕೆಲವೇ ದಿನಗಳಲ್ಲಿ, ಕಿರಿಯ ಮಗನು ಎಲ್ಲವನ್ನೂ ಕೂಡಿಸಿಕೊಂಡು, ದೂರದೇಶಕ್ಕೆ ಪ್ರಯಾಣಮಾಡಿ, ಅಲ್ಲಿ ದುಂದು ವೆಚ್ಚದ ಜೀವನ ಮಾಡಿ ತನ್ನ ಆಸ್ತಿಯನ್ನು ಹಾಳು ಮಾಡಿಕೊಂಡನು.


ಹೀಗೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದ ಮೇಲೆ ಕಡುಗೆಂಪು ಬಣ್ಣದ ಬಟ್ಟೆಯನ್ನು ಅವರಿಂದ ತೆಗೆದುಹಾಕಿ ಅವರ ಸ್ವಂತ ಬಟ್ಟೆಗಳನ್ನು ಅವರಿಗೆ ಉಡಿಸಿ ಶಿಲುಬೆಗೆ ಹಾಕುವುದಕ್ಕಾಗಿ ತೆಗೆದುಕೊಂಡು ಹೋದರು.


ಆಕೆಯು ತಾನೇ ಕಂಬಳಿಗಳನ್ನು ನೇಯುತ್ತಾಳೆ. ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.


“ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.”


ಅವನ ಬಾಗಿಲಲ್ಲಿ, ಮೈತುಂಬಾ ಹುಣ್ಣುಗಳಿದ್ದ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದಿರುತ್ತಿದ್ದನು.


ಜ್ಞಾನವಂತರ ಕಿರೀಟವೇ ಅವರ ಸಂಪತ್ತು, ಆದರೆ ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವನ್ನು ನೀಡುತ್ತದೆ.


ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು