Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:28 - ಕನ್ನಡ ಸಮಕಾಲಿಕ ಅನುವಾದ

28 ನನಗೆ ಐದು ಮಂದಿ ಸಹೋದರರಿದ್ದಾರೆ. ಅವರೂ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಲಾಜರನು ಅವರನ್ನು ಎಚ್ಚರಿಸಲಿ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆ ಕೊಡಲಿ,’ ಎಂದು ಬೇಡಿಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಂದಾರು; ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ಹೇಳಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನನಗೆ ಐದು ಮಂದಿ ಸಹೋದರರಿದ್ದಾರೆ. ಅವರು ಈ ಯಾತನೆಯ ಸ್ಥಳಕ್ಕೆ ಬಾರದಂತೆ ಲಾಜರನು ಅವರನ್ನು ಎಚ್ಚರಿಸಲಿ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಥೈ ಮಾಜಿ ಪಾಚ್‍ ಜಾನಾ ಭಾವಾ ಹಾತ್, ತೊ ತೆಂಕಾ ಜಾವ್ನ್ ಉಶಾರ್ಕಿ ದಿಂವ್ದಿತ್, ತೆನಿ ತರ್‍ಬಿ, ಹ್ಯಾ ವಳ್ವಳ್ಯಾಚ್ಯಾ ಜಾಗ್ಯಾರ್ ಯೆಯ್ನಸ್ತಾನಾ ರಾಂವ್ದಿತ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:28
16 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಪಟ್ಟಣದಲ್ಲಿ ಸೆರೆಮನೆಯೂ ಬಾಧೆಯೂ ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ದೇವರು ಎಚ್ಚರಿಸಿದ್ದಾರೆ.


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು.


ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


“ಆಗ ಅವನು, ‘ಅಪ್ಪಾ, ಹಾಗಾದರೆ ನೀನು ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ಬೇಡಿಕೊಳ್ಳುತ್ತೇನೆ.


ಪೇತ್ರ ಯೋಹಾನರು ಕರ್ತದೇವರ ವಾಕ್ಯದ ಸಾಕ್ಷಿ ಹೇಳಿ ಬೋಧನೆ ಮಾಡಿದ ತರುವಾಯ ಸಮಾರ್ಯದ ಅನೇಕ ಗ್ರಾಮಗಳಲ್ಲಿ ಸುವಾರ್ತೆ ಸಾರಿ, ಯೆರೂಸಲೇಮಿಗೆ ಹಿಂದಿರುಗಿದರು.


ಜೀವಿಸುವವರಿಗೂ ಸತ್ತವರಿಗೂ ನ್ಯಾಯಾಧೀಶರಾಗಿ ದೇವರಿಂದ ನೇಮಕವಾದವರು ಯೇಸುವೇ ಎಂದು ನಾವು ಜನರಿಗೆ ಬೋಧಿಸಿ ಸಾಕ್ಷಿ ಕೊಡಬೇಕೆಂದೂ ಕ್ರಿಸ್ತ ಯೇಸು ನಮಗೆ ಆಜ್ಞಾಪಿಸಿದ್ದಾರೆ.


ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು.


ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು.


ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ಸುನ್ನತಿ ಮಾಡಿಸಿಕೊಳ್ಳಲು ಬಯಸುವ ಪ್ರತಿಯೊಬ್ಬನೂ ನಿಯಮವನ್ನೆಲ್ಲಾ ಕೈಗೊಳ್ಳುವ ಹಂಗಿನಲ್ಲಿದ್ದಾನೆ ಎಂದು ಪುನಃ ದೃಢವಾಗಿ ಹೇಳುತ್ತೇನೆ.


ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು