Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:7 - ಕನ್ನಡ ಸಮಕಾಲಿಕ ಅನುವಾದ

7 “ಬಳಿಕ ಅವನು ಮತ್ತೊಬ್ಬನಿಗೆ, ‘ನೀನೆಷ್ಟು ಸಾಲ ತೀರಿಸಬೇಕು,’ ಎಂದು ಕೇಳಲು, “30 ‘ಟನ್ ಗೋಧಿ,’ ಎಂದನು. “ಆಗ ಅವನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೊಂಡು 24 ಟನ್ ಎಂದು ಬರೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಳಿಕ ಇನ್ನೊಬ್ಬನನ್ನು ಕರೆದು, ‘ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ‘ನೂರು ಖಂಡುಗ ಗೋದಿ’ ಎಂದಾಗ, ‘ಇಗೋ, ನಿನ್ನ ಪತ್ರ, “ಎಂಬತ್ತು” ಎಂದು ಬರೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಳಿಕ ಮತ್ತೊಬ್ಬನನ್ನು - ನೀನು ಏನು ಕೊಡಬೇಕು ಎಂದು ಕೇಳಲು ಅವನು - ನೂರು ಖಂಡುಗ ಗೋದಿ ಅಂದಾಗ ಅವನಿಗೆ - ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಅಂತ ಬರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಬಳಿಕ ಆ ಮೇಲ್ವಿಚಾರಕನು ಎರಡನೆಯವನಿಗೆ, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕಾಗಿದೆ’ ಎಂದು ಕೇಳಿದನು. ಎರಡನೆಯವನು, ‘ನಾನು ಅವನಿಗೆ ಅರವತ್ತುಸಾವಿರ ಕಿಲೋಗ್ರಾಂ ಗೋಧಿ ಕೊಡಬೇಕು’ ಎಂದು ಉತ್ತರಿಸಿದನು. ಆಗ ಆ ಮೇಲ್ವಿಚಾರಕನು ಅವನಿಗೆ, ‘ನಿನ್ನ ಲೆಕ್ಕಪತ್ರ ಇಲ್ಲಿದೆ. ನೀನು ಅದನ್ನು ಕಡಿಮೆ ಮಾಡು. ಐವತ್ತುಸಾವಿರ ಎಂದು ಬರೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾನಾ ತೆನಿ ಅನಿ ಎಕ್ಲ್ಯಾಕ್ ಬಲ್ವುಲ್ಯಾನ್, “ಅನಿ ತಿಯಾ ಕವ್ಡೆ ರಿನ್ ದಿತಲೆ ಹಾಯ್?” ಮನುನ್ ಇಚಾರ್‍ಲ್ಯಾನ್, ತೆನಿ “ಹಜಾರ್ ಚಿಲಾ ಘಂವ್” ಮಟ್ಲ್ಯಾನ್. ತ್ಯಾ ಅಳಾನ್ “ಘೆ ತುಜೊ ಲೆಕ್ಕ್ ಪತ್ರ್, ಅನಿ ಆಟ್‍ಸೆ ಚಿಲಾ ಮನುನ್ ಲಿವ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:7
7 ತಿಳಿವುಗಳ ಹೋಲಿಕೆ  

ಆ ಯಜಮಾನನು ಮೂರನೆಯವನನ್ನು ಕಳುಹಿಸಿದನು. ಆಗ ಅವರು ಅವನನ್ನೂ ಗಾಯಪಡಿಸಿ ಹೊರಗೆ ಹಾಕಿದರು.


ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದರು: “ಒಬ್ಬನು ದ್ರಾಕ್ಷಿಯ ತೋಟವನ್ನು ನೆಟ್ಟು, ಅದನ್ನು ರೈತರಿಗೆ ಗೇಣಿಗೆ ಕೊಟ್ಟು, ದೀರ್ಘಕಾಲ ದೂರದೇಶಕ್ಕೆ ಪ್ರವಾಸಹೋದನು.


“ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು.


ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.


“ ‘ಅವನು, 3,000 ಲೀಟರ್ ಎಣ್ಣೆ,’ ಎಂದನು. “ಆಗ ನಿರ್ವಾಹಕನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೋ, ಬೇಗ ಕುಳಿತುಕೊಂಡು 1,500 ಲೀಟರ್ ಎಂದು ಬರೆ,’ ಎಂದು ಹೇಳಿದನು.


“ಆಗ ಯಜಮಾನನು ಆ ಅಪನಂಬಿಗಸ್ತ ನಿರ್ವಾಹಕನು ಕುಯುಕ್ತಿಯಿಂದ ಮಾಡಿದ್ದನ್ನು ಹೊಗಳಿದನು. ಯೇಸು ಮುಂದುವರಿಸಿ ಹೇಳಿದ್ದು: ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಯುಕ್ತಿಯುಳ್ಳವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು