Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:10 - ಕನ್ನಡ ಸಮಕಾಲಿಕ ಅನುವಾದ

10 ಅದೇ ರೀತಿಯಾಗಿ, ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ, ‘ನಾವು ಅಯೋಗ್ಯರಾದ ಆಳುಗಳಷ್ಟೇ, ನಾವು ಮಾಡಬೇಕಾದ ಕರ್ತವ್ಯವನ್ನೇ ಮಾಡಿದ್ದೇವೆ ಎಂದು ನೀವು ಹೇಳಿರಿ,’ ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ನಿಮಗೆ ಅಪ್ಪಣೆಯಾಗಿರುವದನ್ನೆಲ್ಲಾ ಮಾಡಿದ ಮೇಲೆ ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ ಅನ್ನಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ‘ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಮ್ಚೆಬಿ ತಸೆಚ್, ತುಮ್ಕಾ ಸಾಂಗಟಲ್ಲೆ ಸಗ್ಳೆ ಕರುನ್ ಹೊಲ್ಲ್ಯಾ ತನ್ನಾ ಅಮಿ ಸಾದಾರನ್ ಆಳಾ, ಅಮ್ಚೆ ಕಾಮ್ ಅಮಿ ಕರ್ಲಾಂವ್” ಮನುನ್ ಯವ್ಜುನ್ ಘೆವ್ನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:10
20 ತಿಳಿವುಗಳ ಹೋಲಿಕೆ  

“ದೇವರಿಗೆ ಮೊದಲು ಕೊಟ್ಟು, ಅವರಿಂದ ಪ್ರತಿಫಲವನ್ನು ಪಡೆಯುವವರು ಯಾರು?”


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಲಸಕ್ಕೆ ಬಾರದವರಾಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ ಒಬ್ಬನಾದರೂ ಇಲ್ಲ.”


ನಿಷ್ಪ್ರಯೋಜಕನಾದ ಆ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು,’ ಎಂದನು.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.


ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಕೆಲಸದವನು ಮಾಡಿದ್ದಕ್ಕೆ ಯಜಮಾನನು ಅವನಿಗೆ ಕೃತಜ್ಞತೆ ಸಲ್ಲಿಸುವನೋ?


ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ, ಸಮಾರ್ಯ ಮತ್ತು ಗಲಿಲಾಯ ಪ್ರಾಂತಗಳ ಮಧ್ಯದಲ್ಲಿದ್ದ ಹಳ್ಳಿಯ ಮಾರ್ಗವಾಗಿ ಪ್ರಯಾಣಮಾಡಿದರು.


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು