Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:26 - ಕನ್ನಡ ಸಮಕಾಲಿಕ ಅನುವಾದ

26 “ನೋಹನ ದಿವಸಗಳು ಇದ್ದಂತೆಯೇ, ಅದೇ ರೀತಿಯಲ್ಲಿ ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿವಸಗಳಲ್ಲಿಯೂ ನಡೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಮನುಷ್ಯಕುಮಾರನು ತಿರುಗಿ ಬರುವ ದಿವಸಗಳಲ್ಲಿ ಈ ಲೋಕದ ಸ್ಥಿತಿಯು ನೋಹನ ಕಾಲದ ಸ್ಥಿತಿಯಂತೆಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ನೊಯೆಚ್ಯಾ ಕಾಲಾತ್ ಹೊಲ್ಲ್ಯಾ ಸರ್ಕೆಚ್, ಮಾನ್ಸಾಚೊ ಲೆಕ್ ಯೆತಲ್ಯಾ ಕಾಲಾತ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:26
16 ತಿಳಿವುಗಳ ಹೋಲಿಕೆ  

ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.


ಏಕೆಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಪುತ್ರನಾದ ನಾನು ಬರುವ ದಿನದಲ್ಲಿ ಕಾಣಿಸಿಕೊಳ್ಳುವೆನು.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿ ಒಂದನ್ನು ಕಾಣಬೇಕೆಂದು ನೀವು ಬಯಸುವ ಕಾಲ ಬರುತ್ತದೆ, ಆದರೂ ನೀವು ಅದನ್ನು ಕಾಣುವುದಿಲ್ಲ.


ಈ ಜಲದಿಂದ ಆ ಸಮಯದಲ್ಲಿ ಜಗತ್ತು ಪ್ರಳಯದಲ್ಲಿ ನಾಶವಾಯಿತು.


ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.


ಇದಲ್ಲದೆ ಯೆಹೋವ ದೇವರು, “ನಾನು ಸೃಷ್ಟಿಸಿದ ಮನುಷ್ಯನಿಂದ ಹಿಡಿದು, ಸಕಲ ಪ್ರಾಣಿ, ಆಕಾಶದ ಪಕ್ಷಿಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನು, ಭೂಮಿಯ ಮೇಲಿನಿಂದ ಎಲ್ಲವನ್ನು ನಾಶಮಾಡುವೆನು. ನಾನು ಅವರನ್ನು ಉಂಟುಮಾಡಿದ್ದಕ್ಕೆ ದುಃಖಪಡುತ್ತೇನೆ,” ಎಂದರು.


ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು.


ಆದರೆ ನೋಹನಿಗೆ ಯೆಹೋವ ದೇವರ ದಯೆ ದೊರಕಿತು.


ಆದರೆ ಉತ್ಸಾಹವು, ಸಂತೋಷವು, ದನ ಕೊಳ್ಳುವುದು, ಕುರಿ ಕಡಿಯುವುದು, ಮಾಂಸವನ್ನು ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.


“ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಕೆಲಸದವನಿರಲಾಗಿ, ಅವನು ಹೊಲದ ಕೆಲಸ ಅಥವಾ ಕುರಿ ಮೇಯಿಸಿ ಮನೆಗೆ ಬಂದ ಕೂಡಲೇ ಯಜಮಾನನು ಕೆಲಸದವನಿಗೆ, ‘ಬಾ ಊಟಕ್ಕೆ ಕುಳಿತುಕೋ,’ ಎಂದು ಹೇಳುವುದುಂಟೇ?


ನೋಹನು ನಾವೆಯಲ್ಲಿ ಸೇರಿದ ದಿನದವರೆಗೂ ಅವರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ನಾವೆಯ ಹೊರಗಡೆ ಇದ್ದವರೆಲ್ಲರನ್ನು ನಾಶಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು