Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:3 - ಕನ್ನಡ ಸಮಕಾಲಿಕ ಅನುವಾದ

3 ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಿಂದಿರಿ. “ನಿನ್ನ ಸಹೋದರನು ಅಥವಾ ಸಹೋದರಿ ನಿನಗೆ ವಿರೋಧವಾಗಿ ಪಾಪಮಾಡಿದರೆ, ಅವರನ್ನು ಗದರಿಸು; ಅವರು ಪಶ್ಚಾತ್ತಾಪಪಟ್ಟರೆ, ಅವರನ್ನು ಕ್ಷಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವಾದರೋ ಎಚ್ಚರಿಕೆಯಿಂದಿರಿ! “ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು; ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷವಿುಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಎಚ್ಚರಿಕೆಯಾಗಿರಿ! “ನಿನ್ನ ಸಹೋದರನು ಪಾಪಮಾಡಿದರೆ, ಅವನನ್ನು ಖಂಡಿಸು. ಒಂದುವೇಳೆ ಅವನೇನಾದರೂ ತನ್ನ ತಪ್ಪಿಗಾಗಿ ಪಶ್ಚಾತ್ತಾಪಪಟ್ಟರೆ ಅವನನ್ನು ಕ್ಷಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮ್ಚ್ಯಾ ಕರ್ನ್ಶಾಂಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ. ಜರ್ ತರ್ ತುಜ್ಯಾ ಭಾವಾನ್ ಪಾಪ್ ಕರ್‍ಲ್ಯಾನ್ ತರ್, ತೆಕಾ ಬುದ್‍ಬಾಳ್ ಸಾಂಗ್, ತೆ ಆಯ್ಕುನ್ ತೊ ಬದಲ್ಲ್ಯಾರ್ ತೆಕಾ ಮಾಪ್ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:3
18 ತಿಳಿವುಗಳ ಹೋಲಿಕೆ  

“ ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.


ತರುವಾಯ ಪೇತ್ರನು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ಸಹೋದರ ಅಥವಾ ಸಹೋದರಿ ನನಗೆ ವಿರೋಧವಾಗಿ ಪಾಪಮಾಡಿದರೆ ನಾನು ಎಷ್ಟು ಸಲ ಅವರನ್ನು ಕ್ಷಮಿಸಬೇಕು? ಏಳು ಸಲವೋ?” ಎಂದು ಕೇಳಿದನು.


ಪರಿಹಾಸ್ಯ ಮಾಡುವವನನ್ನು ಗದರಿಸಬೇಡ ಅವನು ನಿನ್ನನ್ನು ಹಗೆ ಮಾಡುವನು; ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.


ಪ್ರಿಯರೇ, ನಿಮ್ಮಲ್ಲಿ ಯಾವನಾದರೂ ಸತ್ಯದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ,


ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.


ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.


ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಪ್ಪಂದವನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವುದು.


ಪರಿಪೂರ್ಣ ಪ್ರತಿಫಲವನ್ನು ನೀವು ಹೊಂದುವಂತೆ ನಾವು ಪ್ರಯಾಸಪಟ್ಟು ಮಾಡಿದವುಗಳು ನಷ್ಟವಾಗದಂತೆ ಎಚ್ಚರವಹಿಸಿರಿ.


ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಬುದ್ಧಿಹೀನನ ಬೆನ್ನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟುತ್ತದೆ.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.


ಆದ್ದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರಿ. ಯೆಹೋವ ದೇವರು ಹೋರೇಬಿನಲ್ಲಿ ಬೆಂಕಿಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿಲ್ಲವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು