Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:13 - ಕನ್ನಡ ಸಮಕಾಲಿಕ ಅನುವಾದ

13 “ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ, ತೊ ತೆರ್‍ಗಿ ವಸುಲ್ ಕರ್‍ತಲೊ, ಪಾಪಿ ಮಾನುಸ್, ಧುರುಚ್ ಇಬೆ ರ್‍ಹಾಲೊ, ತೆನಿ ಟಕ್ಲೆ ವೈರ್ ಕರುನ್ ಅಪ್ನಾಚೆ ಡೊಳೆ ಸೈತ್ ಸರ್‍ಗಾಕ್ ಲಾವುಕ್ನಾ, ಅಪ್ನಾಚೆ ಹಿರ್‍ದೆ ಬಡ್ವುನ್ ಘೆಟ್ಲ್ಯಾನ್, ಅನಿ “ದೆವಾ ಮಿಯಾ ಎಕ್ ಪಾಪಿ ಮಾನುಸ್, ಮಾಜಿ ದಯಾ ಕರ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:13
45 ತಿಳಿವುಗಳ ಹೋಲಿಕೆ  

ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.


“ಯೆಹೋವ ದೇವರೇ, ನನಗೆ ಕರುಣೆ ತೋರಿಸಿ ನನ್ನನ್ನು ಸ್ವಸ್ಥಮಾಡಿರಿ, ಏಕೆಂದರೆ ನಿಮಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದು ನಾನು ಹೇಳಿ ಬೇಡುವೆನು.


ಆ ದೃಶ್ಯವನ್ನು ಕಾಣಲು ಬಂದ ಜನರು ನಡೆದ ಘಟನೆಗಳನ್ನು ಕಂಡು, ತಮ್ಮ ಎದೆಗಳನ್ನು ಬಡಿದುಕೊಂಡು ಹಿಂದಿರುಗಿ ಹೋದರು.


ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ, ಎಂದು ಕರ್ತದೇವರು ನುಡಿಯುತ್ತಾರೆ.”


ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.


ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.


ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.


ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ನನ್ನ ಅನ್ಯಾಯವು ಬಹು ಘೋರವಾಗಿದ್ದರೂ ನಿಮ್ಮ ಹೆಸರಿನ ನಿಮಿತ್ತ ಯೆಹೋವ ದೇವರೇ ನನ್ನನ್ನು ಮನ್ನಿಸಿರಿ.


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ.


ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ, ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ. ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.


ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ಯೇಸು ಒಂದು ಹಳ್ಳಿಯನ್ನು ಪ್ರವೇಶಿಸಿದಾಗ, ಹತ್ತು ಮಂದಿ ಕುಷ್ಠರೋಗಿಗಳು ಯೇಸುವಿನ ಕಡೆಗೆ ಬಂದು ದೂರದಲ್ಲಿ ನಿಂತುಕೊಂಡು,


ನಾವು ಪಾಪಮಾಡಿದ್ದೇವೆ ಮತ್ತು ಅಕ್ರಮಗಳನ್ನು ಮಾಡಿದ್ದೇವೆ. ಕೆಟ್ಟವರಾಗಿ ನಡೆದಿದ್ದೇವೆ ಮತ್ತು ತಿರುಗಿಬಿದ್ದಿದ್ದೇವೆ. ನಿಮ್ಮ ಕಟ್ಟಳೆಗಳನ್ನು ಮತ್ತು ನ್ಯಾಯಗಳನ್ನು ತೊರೆದುಬಿಟ್ಟಿದ್ದೇವೆ.


ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ, ಏಕೆಂದರೆ ಯೆಹೋವ ದೇವರ ಬಳಿಯಲ್ಲಿ ಒಂಡಬಡಿಕೆಯ ಪ್ರೀತಿ ಇರುತ್ತದೆ, ಸಂಪೂರ್ಣ ವಿಮೋಚನೆಯೂ ಇರುತ್ತದೆ.


ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ದೊರಕಲಿ, ನಿಮ್ಮ ವಾಗ್ದಾನದ ರಕ್ಷಣೆಯು ನನಗೆ ಉಂಟಾಗಲಿ;


ನಮ್ಮ ಪಿತೃಗಳಂತೆ ನಾವು ಕೂಡಾ ಪಾಪಮಾಡಿದ್ದೇವೆ; ಅಕ್ರಮ ಮಾಡಿದ್ದೇವೆ; ದುಷ್ಟಕೃತ್ಯಗಳನ್ನು ನಡೆಸಿದ್ದೇವೆ.


ಲೆಕ್ಕವಿಲ್ಲದಷ್ಟು ಕೇಡುಗಳು ನನ್ನನ್ನು ಸುತ್ತಿಕೊಂಡಿವೆ. ನಾನು ಏನೂ ನೋಡಲಾರದಷ್ಟು ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿವೆ; ನನ್ನ ಪಾಪಗಳು ತಲೆಯ ಕೂದಲುಗಳಿಗಿಂತ ಹೆಚ್ಚಾಗಿವೆ, ಆದ್ದರಿಂದ ನನ್ನ ಹೃದಯವು ಕುಂದಿಹೋಗಿದೆ.


ಆಮೋನನು ತನ್ನ ತಂದೆ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ, ಯೆಹೋವ ದೇವರ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ. ಆದರೆ ಆಮೋನನು ಅಧಿಕವಾಗಿ ಅಪರಾಧ ಮಾಡಿದನು.


ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.


ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


“ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಫಿಲಿಪ್ಪ, ಬಾರ್ತೊಲೊಮಾಯ; ತೋಮ, ಸುಂಕದವನಾದ ಮತ್ತಾಯ; ಅಲ್ಫಾಯನ ಮಗ ಯಾಕೋಬ, ತದ್ದಾಯ;


ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು.


ಯೇಸು ಅವರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣಕಾಲೂರಿ,


ಜನರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡುವಾಗ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಯೆಹೋವ ದೇವರನ್ನು ಆರಾಧಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು