ಲೂಕ 18:22 - ಕನ್ನಡ ಸಮಕಾಲಿಕ ಅನುವಾದ22 ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೇಸು ಅದನ್ನು ಕೇಳಿ ಅವನಿಗೆ - ಇನ್ನೂ ನಿನಗೆ ಒಂದು ಕಡಿಮೆಯಾಗಿದೆ; ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಹೆ ಆಯ್ಕಲ್ಲ್ಯಾ ತನ್ನಾ, ಜೆಜುನ್ ತೆಕಾ “ಖಾಲಿ ಎಕ್ ಕಾಮ್ ತಿಯಾ ಕರ್‍ತಲೆ ಹುರ್‍ಲಾ; ತುಜೆ ಮನುನ್ ಹೊತ್ತೆ ಸಗ್ಳೆ ಇಕ್, ಅನಿ ಯೆಲ್ಲೆ ಪಯ್ಸೆ ಗರಿಬಾಕ್ನಿ ದಿ, ಅನಿ ಸರ್‍ಗಾರ್ ತುಕಾ ಸಾವ್ಕಾರ್ಕಿ ತಯಾರ್ ಕರುನ್ ಥವಲ್ಲಿ ರ್‍ಹಾತಾ, ಮಾನಾ ಯೆವ್ನ್ ಮಾಜ್ಯಾ ಫಾಟ್ನಾ ಯೆ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |