Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:37 - ಕನ್ನಡ ಸಮಕಾಲಿಕ ಅನುವಾದ

37 “ನಜರೇತಿನ ಯೇಸು ಹಾದು ಹೋಗುತ್ತಿದ್ದಾರೆ,” ಎಂದು ಜನರು ಅವನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 “ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆ,” ಎಂದು ಅವನಿಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅವರು ಅವನಿಗೆ - ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಜನರು ಅವನಿಗೆ, “ನಜರೇತಿನ ಯೇಸು ಬರುತ್ತಿದ್ದಾನೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತೆನಿ ತೆಕಾ, “ನಜರೆತಾಚೊ ಜೆಜು ಹಿತ್ನಾ ದಾಟುನ್ ಜಾವ್ಕ್ ಲಾಗ್ಲಾ” ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:37
11 ತಿಳಿವುಗಳ ಹೋಲಿಕೆ  

ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.


ಏಕೆಂದರೆ ದೇವರು ಹೇಳಿದ ಹಾಗೆ, “ಪ್ರಸನ್ನತೆಯ ಕಾಲದಲ್ಲಿ ನಿನ್ನ ಪ್ರಾರ್ಥನೆಯನ್ನು ನಾನು ಲಾಲಿಸಿದೆನು. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು,” ಇಗೋ, ಇದೇ ದೇವರ ಮೆಚ್ಚುಗೆಯ ಕಾಲ, ಈಗಲೇ ರಕ್ಷಣೆಯ ದಿನ.


ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.


“ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.


ಪಿಲಾತನು ಒಂದು ಫಲಕದ ಮೇಲೆ ಶಿರೋನಾಮವನ್ನು ಬರೆಸಿ, ಅದನ್ನು ಶಿಲುಬೆಯ ಮೇಲಿಟ್ಟಿದ್ದನು. ಅದೇನಂದರೆ: ಯೆಹೂದ್ಯರ ಅರಸನಾದ ನಜರೇತಿನ ಯೇಸು.


ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.


ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ಜನಸಮೂಹವು ಹಾದು ಹೋಗುವುದನ್ನು ಇವನು ಕೇಳಿಸಿಕೊಂಡು, ಅದೇನೆಂದು ವಿಚಾರಿಸಿದನು.


ಆಗ ಅವನು, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸಿ!” ಎಂದು ಗಟ್ಟಿಯಾಗಿ ಕೂಗಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು