Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:5 - ಕನ್ನಡ ಸಮಕಾಲಿಕ ಅನುವಾದ

5 ಆದರೂ ಈ ವಿಧವೆಯು ನನಗೆ ತೊಂದರೆಕೊಟ್ಟು ಪದೇಪದೇ ನನ್ನ ಬಳಿಗೆ ಬಂದು, ನನ್ನನ್ನು ಕಾಡಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು,’ ” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಷ್ಟಾದರೂ ಈ ವಿಧವೆಯ ಕಾಟವನ್ನು ತಪ್ಪಿಸಿಕೊಳ್ಳಲು, ಈಕೆಯ ನ್ಯಾಯ ತೀರಿಸಿಬಿಡುತ್ತೇನೆ. ಇಲ್ಲವಾದರೆ, ಈಕೆ ಪದೇಪದೇ ಬಂದು ನನ್ನ ತಲೆಕೆಡಿಸಿಬಿಟ್ಟಾಳು,’ ಎಂದುಕೊಂಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುವದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು; ಇಲ್ಲವಾದರೆ ಈಕೆಯು ಬಂದು ಬಂದು ಕಡೆಗೆ ನನ್ನನ್ನು ದಣಿಸಾಳು ಎಂದು ತನ್ನೊಳಗೆ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಈ ಸ್ತ್ರೀ ಬಂದುಬಂದು ನನ್ನನ್ನು ಕುಗ್ಗಿಸಿಬಿಡುತ್ತಾಳೆ. ಈಕೆಗೆ ನಾನು ನ್ಯಾಯವನ್ನು ದೊರಕಿಸಿಕೊಟ್ಟರೆ, ಈಕೆ ನನ್ನನ್ನು ಕಾಡಿಸುವುದಿಲ್ಲ. ಇಲ್ಲವಾದರೆ, ಈಕೆಯು ನನ್ನನ್ನು ಕಾಡಿಸುತ್ತಲೇ ಇರುವಳು’ ಎಂದುಕೊಂಡನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜಾಲ್ಯಾರ್‍ಬಿ ಹ್ಯಾ ಘೊಮರಲ್ಲ್ಯಾ ಬಾಯ್ಕೊಮನ್ಸಿಕ್ ಮಿಯಾ ಕಾಯ್ತರ್ ತಿರ್‍ಮಾನ್ ಕರುನ್ ದಿವ್ಚೊ, ಅನಿ ತಿಚೊ ಹಕ್ಕ್ ತಿಕಾ ಗಾವಿ ಸರ್ಕೆ ಕರುಚೆ, ಮಿಯಾ ತಿಕಾ ಕಾಯ್ಬಿ ನಿರ್‍ನಯ್ ಕರುನ್ ದಿನಸ್ಲ್ಯಾರ್, ಸದ್ದಿ ಯೆವ್ನ್, ತಿ, ಮಾಜೆ ಟಕ್ಲೆ ಖಾತಾ!” ಮನುನ್ ಯವ್ಜುನ್ ಘೆಟ್ಲ್ಯಾನ್. ಅನಿ ತಿಕಾ ಎಕ್ ನಿರ್‍ನಯ್ ಕರುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:5
9 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವುದೇನೆಂದರೆ, ಅವನು ಸ್ನೇಹಿತನಾಗಿರುವುದರಿಂದ ಎದ್ದು ಇವನಿಗೆ ಕೊಡದೆಹೋದರೂ ಮೇಲಿಂದ ಮೇಲೆ ನಾಚಿಕೆಪಡದೆ ಬೇಡುವುದರಿಂದ ಎದ್ದು ಇವನಿಗೆ ಬೇಕಾದಷ್ಟು ಕೊಡುವನು.


ಮುಂದೆ ಹೋಗುತ್ತಿದ್ದವರು ಸುಮ್ಮನಿರುವಂತೆ ಅವನನ್ನು ಗದರಿಸಿದರು, ಆದರೂ ಅವನು, “ದಾವೀದನ ಪುತ್ರರೇ, ನನ್ನನ್ನು ಕರುಣಿಸಿ,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.


ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ, ತೊಂದರೆ ಪಡಿಸಿದ್ದರಿಂದ, ಅವನ ಪ್ರಾಣವು ಸಾಯುವಷ್ಟು ವ್ಯಸನಪಟ್ಟಿತು.


ಆದರೆ ಯೇಸು ಆಕೆಗೆ ಉತ್ತರ ಕೊಡಲಿಲ್ಲ. ಆಗ ಶಿಷ್ಯರು ಯೇಸುವಿನ ಬಳಿ ಬಂದು, “ಆಕೆಯನ್ನು ಕಳುಹಿಸಿಬಿಡು, ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ” ಎಂದು ಕೇಳಿಕೊಂಡರು.


ಅದೇ ಪಟ್ಟಣದಲ್ಲಿ ಒಬ್ಬ ವಿಧವೆಯಿದ್ದಳು. ಆಕೆ ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿಯ ಎದುರಾಗಿ ನನಗೆ ನ್ಯಾಯ ದೊರಕಿಸಿಕೊಡು,’ ಎಂದು ಕೇಳಿಕೊಳ್ಳುತ್ತಿದ್ದಳು.


ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.


ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಉತ್ತರ ಕಳುಹಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು