Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:13 - ಕನ್ನಡ ಸಮಕಾಲಿಕ ಅನುವಾದ

13 ಆ ವ್ಯಕ್ತಿ ತನ್ನ ಹತ್ತು ಕೆಲಸಗಾರರನ್ನು ಕರೆದು, ಅವರಿಗೆ ಹತ್ತು ನಾಣ್ಯಗಳನ್ನು ಒಪ್ಪಿಸಿ, ‘ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರಿ,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೊರಡುವಾಗ ತನ್ನ ಹತ್ತುಮಂದಿ ಸೇವಕರನ್ನು ಕರೆದು, ಒಬ್ಬೊಬ್ಬನಿಗೂ ಒಂದರಂತೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, “ನಾನು ಬರುವತನಕ ವ್ಯಾಪಾರ ಮಾಡಿಕೊಂಡಿರಿ,” ಎಂದು ಹೇಳಿ ಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಕೊಟ್ಟು - ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರ್ರಿ ಎಂದು ಹೇಳಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ಅವನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಒಟ್ಟಾಗಿ ಕರೆದು ಅವರಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಸಾವಿರ ರೂಪಾಯಿ ಕೊಟ್ಟು, ‘ನಾನು ಹಿಂತಿರುಗಿ ಬರುವವರೆಗೆ ಈ ಹಣದಿಂದ ವ್ಯಾಪಾರ ಮಾಡಿರಿ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೊ ಘರ್ ಸೊಡುನ್ ಜಾವ್ಚ್ಯಾ ಅದ್ದಿ, ತೆನಿ ಅಪ್ನಾಚ್ಯಾ ಧಾ ಜಾನಾ ಆಳಾಕ್ನಿ ಬಲ್ವುಲ್ಯಾನ್, ಅನಿ ಹರ್ ಎಕ್ಲ್ಯಾಕ್ ಎಕ್ಯೆಕ್, ಸೊನ್ಯಾಚ್ಯಾ ಪಯ್ಸಾಚಿ ಗಾಲಿ ದಿಲ್ಯಾನ್, ಅನಿ “ಮಿಯಾ ಯೆಯ್ ಪತರ್, ಹ್ಯಾ ಪೈಸ್ಯಾಚ್ಯಾ ವೈನಾ ತುಮ್ಕಾ ಕವ್ಡೆ ಕಮ್ವುಕ್ ಹೊತಾ, ತವ್ಡೆ ಕಮ್ವುನ್ ಘೆವ್ನ್ ರ್‍ಹಾವಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:13
15 ತಿಳಿವುಗಳ ಹೋಲಿಕೆ  

ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.


ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.


ಆಗ ಐದು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಬಂದು ಬೇರೆ ಐದು ಚಿನ್ನದ ನಾಣ್ಯಗಳನ್ನು ತಂದು, ‘ಒಡೆಯನೇ, ನೀನು ನನಗೆ ಐದು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಅವುಗಳಲ್ಲದೆ ಇನ್ನೂ ಬೇರೆ ಐದು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.


“ಎರಡು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಸಹ ಬಂದು, ‘ಒಡೆಯನೇ, ನೀನು ನನಗೆ ಎರಡು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಇನ್ನೂ ಎರಡು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.


“ಆಗ ಒಂದು ಚಿನ್ನದ ನಾಣ್ಯ ಹೊಂದಿದ್ದವನು ಬಂದು, ‘ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು.


ಯೇಸು ಇನ್ನೊಂದು ಸಾಮ್ಯವನ್ನು ಹೇಳಿದರು: “ಘನವಂತನಾಗಿದ್ದ ಒಬ್ಬನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರುಗಿ ಬರುವುದಕ್ಕಾಗಿ ದೂರದೇಶಕ್ಕೆ ಹೊರಟುಹೋದನು.


“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು