ಲೂಕ 19:44 - ಕನ್ನಡ ಸಮಕಾಲಿಕ ಅನುವಾದ44 ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಅನಿ ತೆನಿ ತುಜ್ಯಾ ಭುತ್ತುರ್ ಹೊತ್ತ್ಯಾ ಸಗ್ಳ್ಯಾ ಲೊಕಾಕ್ನಿ ನಾಸ್ ಕರ್‍ತ್ಯಾತ್; ತುಜ್ಯಾ ಭೊತ್ಯಾನ್ಲ್ಯಾ ಭಿತ್ತಿಚೊ ಎಕ್ ಗುಂಡ್ಯಾರ್ ಗುಂಡೊ ಸೈತ್ ಥೈನಸ್ತಾನಾ ಕೊಸ್ಳುನ್ ಘಾಲ್ತ್ಯಾತ್, ಕಶ್ಯಾಕ್ ಮಟ್ಲ್ಯಾರ್, ದೆವ್ ತುಕಾ ಬಚಾವ್ ಕರುಕ್ ಮನುನ್ ಯೆಲ್ಲೊ ಎಳ್ ತಿಯಾ ವಳ್ಕುಕ್ ನೈ! ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.