Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:47 - ಕನ್ನಡ ಸಮಕಾಲಿಕ ಅನುವಾದ

47 ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಮತ್ತು ಆತನು ದಿನಾಲು ದೇವಾಲಯದಲ್ಲಿ ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮಹಾಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ಮುಖ್ಯಸ್ಥರೂ ಆತನನ್ನು ಕೊಲ್ಲುವದಕ್ಕೆ ಸಂದರ್ಭನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಯೇಸು ದೇವಾಲಯದಲ್ಲಿ ಪ್ರತಿದಿನ ಜನರಿಗೆ ಉಪದೇಶಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಜನರ ನಾಯಕರಲ್ಲಿ ಕೆಲವರು ಯೇಸುವನ್ನು ಕೊಲ್ಲಲು ಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಸದ್ದಿಚ್ ಜೆಜು ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುಲಾಗಲ್ಲೊ, ಮುಖ್ಯ ಯಾಜಕಾ, ಖಾಯ್ದೆ ಶಿಕ್ವುತಲಿ ಲೊಕಾ , ಅನಿ ಲೊಕಾಂಚಿ ವ್ಹಡಿಲಾ ಜೆಜುಕ್ ಜಿವಾನಿ ಮಾರ್‍ತಲಿ ಯವ್ಜನ್ ಕರುಕ್ ಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:47
17 ತಿಳಿವುಗಳ ಹೋಲಿಕೆ  

ಮುಖ್ಯಯಾಜಕರೂ ನಿಯಮ ಬೋಧಕರೂ ಅದನ್ನು ಕೇಳಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಯೇಸುವಿನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಯೇಸುವಿಗೆ ಭಯಪಟ್ಟರು.


ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.


ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.


ತಿರುಗಿ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡು ಹೋದರು.


ಅವರಲ್ಲಿ ಕೆಲವರು ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಯಾರೂ ಯೇಸುವಿನ ಮೇಲೆ ಕೈಹಾಕಲಿಲ್ಲ.


ಮೋಶೆಯು ನಿಮಗೆ ನಿಯಮವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಯಾರೂ ಆ ನಿಯಮದಂತೆ ನಡೆಯುವುದಿಲ್ಲ. ನೀವು ನನ್ನನ್ನು ಕೊಲ್ಲಲು ಹುಡುಕುವುದೇಕೆ?” ಎಂದು ಕೇಳಿದರು.


ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.


ಆಗ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ತಮ್ಮ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದರೆಂದು ತಿಳಿದು ಯೇಸುವನ್ನು ಹಿಡಿಯುವುದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿ, ಯೇಸುವನ್ನು ಬಿಟ್ಟು ಹೊರಟು ಹೋದರು.


ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.


ನಾನು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಾ ನಿಮ್ಮ ಸಂಗಡ ಇದ್ದೆನು. ಆಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಪವಿತ್ರ ವೇದಗಳಲ್ಲಿ ಬರೆದಿದ್ದು ನೆರವೇರಲೇಬೇಕು,” ಎಂದರು.


ಜನರೆಲ್ಲರೂ ಯೇಸು ಹೇಳುವ ಒಂದೊಂದು ಮಾತಿಗೂ ಬಹಳ ಲಕ್ಷ್ಯಕೊಟ್ಟು ಯೇಸುವಿನ ಉಪದೇಶವನ್ನು ಕೇಳುತ್ತಿದ್ದುದರಿಂದ, ಅವರಿಗೆ ಏನು ಮಾಡಬೇಕೋ ತೋಚಲಿಲ್ಲ.


ಅದೇ ಗಳಿಗೆಯಲ್ಲಿ ನಿಯಮ ಬೋಧಕರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸುವುದಕ್ಕೆ ಹವಣಿಸಿದರು. ಏಕೆಂದರೆ ಯೇಸು ತಮಗೆ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದ್ದಾರೆಂದು ಅವರು ತಿಳಿದುಕೊಂಡರು. ಆದರೂ ಅವರು ಜನರಿಗೆ ಭಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು