ಲೂಕ 19:5 - ಕನ್ನಡ ಸಮಕಾಲಿಕ ಅನುವಾದ5 ಯೇಸು ಆ ಸ್ಥಳಕ್ಕೆ ಬಂದು, ಮೇಲಕ್ಕೆ ನೋಡಿ ಅವನಿಗೆ, “ಜಕ್ಕಾಯನೇ, ತಕ್ಷಣವೇ ಇಳಿದು ಬಾ. ನಾನು ಇಂದು ನಿನ್ನ ಮನೆಯಲ್ಲಿ ತಂಗಬೇಕು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ - ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಇಳುಕೊಳ್ಳಬೇಕು ಎಂದು ಅವನಿಗೆ ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೇಸು ಆ ಸ್ಥಳಕ್ಕೆ ಬಂದಾಗ, ಮರದ ಮೇಲೆ ಕುಳಿತಿದ್ದ ಜಕ್ಕಾಯನನ್ನು ಕಣ್ಣೆತ್ತಿ ನೋಡಿ ಅವನಿಗೆ, “ಜಕ್ಕಾಯನೇ ಬೇಗನೆ ಕೆಳಗಿಳಿದು ಬಾ! ಈ ದಿನ ನಾನು ನಿನ್ನ ಮನೆಯಲ್ಲಿ ಇಳಿದುಕೊಳ್ಳಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಜೆಜುನ್ ತ್ಯಾ ಜಾಗ್ಯಾರ್ ಯೆವ್ನ್ ಪಾವಲ್ಲ್ಯಾ, ತನ್ನಾ ವೈರ್ ಬಗಟ್ಲ್ಯಾನ್ ಅನಿ ಜಾಕ್ಕೆವ್ಸಾಕ್, ಜಾಕ್ಕೆವ್ಸ್, ಲಗ್ಗುನಾ ಖಾಲ್ತಿ ಉತ್ರುನ್ ಯೆ, ಕಶ್ಯಾಕ್ ಮಟ್ಲ್ಯಾರ್, ಆಜ್ ತುಜ್ಯಾ ಘರಾತ್ ಮಾಕಾ ವಸ್ತಿ ರ್‍ಹಾವ್ಕ್ ಪಾಜೆ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |