Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:13 - ಕನ್ನಡ ಸಮಕಾಲಿಕ ಅನುವಾದ

13 ತಕ್ಷಣವೇ ಆ ದೂತನ ಸಂಗಡ ಇದ್ದ ಪರಲೋಕ ಸೈನ್ಯದ ಸಮೂಹವು ದೇವರನ್ನು ಕೊಂಡಾಡುತ್ತಾ ಹೀಗೆ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13-14 ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತಕ್ಷಣವೇ ಆ ದೂತನ ಸಂಗಡ ಸ್ವರ್ಗದ ದೂತಪರಿವಾರವೊಂದು ಕಾಣಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಫಕ್ಕನೆ ಆ ದೂತನ ಸಂಗಡ ಪರಲೋಕಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ತಕ್ಷಣವೇ ಪರಲೋಕದಿಂದ ದೇವದೂತರು ಬಹು ದೊಡ್ಡ ಗುಂಪಾಗಿ ಬಂದು ಮೊದಲನೆಯ ದೇವದೂತನೊಡನೆ ಸೇರಿಕೊಂಡರು. ಅವರೆಲ್ಲರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಎಗ್ದಮ್, ಸರ್‍ಗಾ ವೈಲ್ಯಾ ದೆವಾಚ್ಯಾ ದುತಾಂಚೊ ತಾಂಡೊ “ದೆವಾಕ್ ಆರಾದನ್” ಕರುಕ್ ಮನುನ್ ಗಿತ್ ಮನ್ತಲೊ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:13
18 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ನೋಡಲಾಗಿ, ಸಿಂಹಾಸನದ ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು.


ದೇವರ ದೂತರುಗಳೇ, ದೇವರನ್ನು ಸ್ತುತಿಸಿರಿ; ದೇವರ ಪರಲೋಕದ ಎಲ್ಲಾ ಸೈನ್ಯಗಳೇ, ದೇವರನ್ನು ಸ್ತುತಿಸಿರಿ.


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.


ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಉದಯದ ನಕ್ಷತ್ರಗಳು ಕೂಡಿ ಹಾಡುತ್ತಿರುವಾಗ, ದೇವದೂತರೆಲ್ಲರೂ ಹರ್ಷಧ್ವನಿಮಾಡುತ್ತಿರುವಾಗ, ಭೂಮಿಗೆ ಮೂಲೆಗಲ್ಲು ಹಾಕಿದವರಾರು?


ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತ ಆಗಿರುವ ಯೆಹೋವ ದೇವರು ಅವುಗಳ ಸಮೇತವಾಗಿ ಸೀನಾಯಿ ಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾರೆ.


ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.


ಆಗ ಅವನು ಒಂದು ಕನಸುಕಂಡನು. ಏಣಿಯು ಭೂಮಿಯ ಮೇಲೆ ನಿಂತಿತ್ತು. ಅದರ ತುದಿಯು ಪರಲೋಕಕ್ಕೆ ಮುಟ್ಟಿತ್ತು. ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.


ಆಮೇಲೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ಮಹಿಮೆಯಿಂದ ಕೂಡಿದ ಯೆಹೋವ ದೇವರ ಮಹಿಮೆಯು ಅವರ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಅಲ್ಲಿ ಬಟ್ಟೆಯಿಂದ ಸುತ್ತಿರುವ ಶಿಶುವು ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ಇದೇ ನಿಮಗೆ ಗುರುತು,” ಎಂದು ಹೇಳಿದನು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು