Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:15 - ಕನ್ನಡ ಸಮಕಾಲಿಕ ಅನುವಾದ

15 ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು, “ದೇವರು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೇವದೂತರು ಸ್ವರ್ಗಕ್ಕೆ ಹಿಂದಿರುಗಿದ ಮೇಲೆ ಕುರುಬರು, ‘ಬನ್ನಿ, ಸರ್ವೇಶ್ವರ ನಮಗೆ ತಿಳಿಸಿದ ಘಟನೆಯನ್ನು ನೋಡಲು ಈಗಲೇ ಬೆತ್ಲೆಹೇಮಿಗೆ ಹೋಗೋಣ,’ ಎಂದು ಒಬ್ಬರಿಗೆ ಒಬ್ಬರು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು - ನಾವು ಈಗಲೇ ಬೇತ್ಲೆಹೇವಿುಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡೋಣ ನಡೆಯಿರಿ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು ತಟ್ಟನೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವದೂತರು ಕುರುಬರ ಬಳಿಯಿಂದ ಪರಲೋಕಕ್ಕೆ ಹಿಂತಿರುಗಿದ ಮೇಲೆ ಕುರುಬರು, “ನಾವು ಈಗಲೇ ಬೆತ್ಲೆಹೇಮಿಗೆ ಹೋಗಿ, ಪ್ರಭುವು ನಮಗೆ ತಿಳಿಸಿದ ಈ ಘಟನೆಯನ್ನು ನೋಡೋಣ” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ದೆವಾಚಿ ದುತಾ ಸರ್‍ಗಾರ್ ಪರ್ತುನ್ ಗೆಲ್ಲ್ಯಾ ತನ್ನಾ ತಿ ಕುರ್‍ಬುರಾ ಎಕಾಮೆಕಾಕ್ನಿ “ಚಲಾ ಬೆತ್ಲೆಹೆಮಾಕ್ ಜಾಂವಾ ಅನಿ ದೆವಾನ್ ಅಮ್ಕಾ ಸಾಂಗಲ್ಲೆ ಬಗುನ್ ಯೆವಾ” ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:15
12 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ಯೆಹೋವ ದೇವರ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷ ಪಡುವವರೆಲ್ಲರು ಅವುಗಳನ್ನೇ ಧ್ಯಾನಿಸುತ್ತಾರೆ.


ಯೇಸು ಅವರನ್ನು ಆಶೀರ್ವದಿಸುತ್ತಿರುವಾಗಲೇ ಅವರನ್ನು ಬಿಟ್ಟು ಮೇಲೆ ಪರಲೋಕಕ್ಕೆ ಏರಿದರು.


ಅವರು ನಡೆಯುತ್ತಾ ಬಂದು ಮಾತನಾಡಿಕೊಂಡಿರುವಾಗ, ಬೆಂಕಿಯ ರಥವೂ ಬೆಂಕಿಯ ಕುದುರೆಗಳೂ ಅವರಿಬ್ಬರನ್ನೂ ಬೇರೆಯಾಗಿ ಮಾಡಿದವು. ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.


ಯೆಹೋವ ದೇವರು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ, ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.


ಆಗ ಮೋಶೆಯು, “ನಾನು ಹೋಗಿ ಆ ವಿಚಿತ್ರ ನೋಟವನ್ನೂ ಪೊದೆಯು ಏಕೆ ಸುಟ್ಟುಹೋಗಲಿಲ್ಲವೆಂಬುದನ್ನೂ ನೋಡುವೆನು,” ಎಂದುಕೊಂಡನು.


ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ಅವರು ಅವಸರದಿಂದ ಹೋಗಿ ಮರಿಯಳನ್ನೂ ಯೋಸೇಫನನ್ನೂ ಕೊಟ್ಟಿಗೆಯಲ್ಲಿ ಮಲಗಿದ್ದ ಶಿಶುವನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು