Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:17 - ಕನ್ನಡ ಸಮಕಾಲಿಕ ಅನುವಾದ

17 ಅನಂತರ, ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ದೇವದೂತನ ಮಾತನ್ನು ಪ್ರಕಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ದೇವದೂತನು ತಮಗೆ ಹೇಳಿದ್ದ ಮಾತನ್ನು ಅವರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕಂಡಮೇಲೆ ಆ ಮಗುವಿನ ವಿಷಯವಾಗಿ ದೂತನು ತಮಗೆ ಹೇಳಿದ್ದನ್ನೆಲ್ಲ ಅವರಿಗೆ ತಿಳಿಯಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ತಮಗೆ ಹೇಳಿದ್ದ ಮಾತನ್ನು ತಿಳಿಯಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕುರುಬರು ಮಗುವನ್ನು ನೋಡಿದಾಗ ಅದರ ವಿಷಯವಾಗಿ ತಮಗೆ ದೇವದೂತರು ತಿಳಿಸಿದ್ದನ್ನು ಅವರಿಗೆ ತಿಳಿಯಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆನಿ ಬಗಟಲ್ಲ್ಯಾ ತನ್ನಾ ದೆವಾಚ್ಯಾ ದುತಾನ್ ಪೊರಾಂಚ್ಯಾ ವಿಶಯಾತ್ ತೆಂಕಾ ಕಾಯ್-ಕಾಯ್ ಸಾಂಗಟಲ್ಲೆ ತೆಂಕಾ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:17
10 ತಿಳಿವುಗಳ ಹೋಲಿಕೆ  

“ನೀನು ನಿನ್ನ ಮನೆಗೆ ಹಿಂದಿರುಗಿ ಹೋಗಿ ದೇವರು ನಿನಗೆ ಎಂಥಾ ಮಹಾಕಾರ್ಯಗಳನ್ನು ಮಾಡಿದ್ದಾರೆಂಬುದನ್ನು ಹೇಳು,” ಎಂದು ಅವನನ್ನು ಕಳುಹಿಸಿಬಿಟ್ಟರು. ಅವನು ತನ್ನ ಮಾರ್ಗವಾಗಿ ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ಊರೆಲ್ಲಾ ಸಾರಿದನು.


ಸಮಸ್ತ ದೇವಭಕ್ತರೇ, ಬಂದು ಕೇಳಿರಿ. ದೇವರು ನನಗೆ ಮಾಡಿದ್ದನ್ನು ನಾನು ನಿಮಗೆ ತಿಳಿಸುವೆನು.


ಆ ಸಂದರ್ಭದಲ್ಲಿ ಅನ್ನಳು ಬಂದು, ದೇವರನ್ನು ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಶಿಶುವಿನ ವಿಷಯವಾಗಿ ಮಾತನಾಡಿದಳು.


ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.


ಅವರು ಅವಸರದಿಂದ ಹೋಗಿ ಮರಿಯಳನ್ನೂ ಯೋಸೇಫನನ್ನೂ ಕೊಟ್ಟಿಗೆಯಲ್ಲಿ ಮಲಗಿದ್ದ ಶಿಶುವನ್ನು ಕಂಡರು.


ಕುರುಬರು ಹೇಳಿದ ವಿಷಯಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು