Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:20 - ಕನ್ನಡ ಸಮಕಾಲಿಕ ಅನುವಾದ

20 ತಮಗೆ ತಿಳಿಸಿದ ಪ್ರಕಾರವೇ ಕುರುಬರು ತಾವು ಕೇಳಿ, ಕಂಡ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ, ಕೊಂಡಾಡುತ್ತಾ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇತ್ತ, ಕುರುಬರು ತಾವು ಕೇಳಿದ್ದನ್ನು ನೆನೆಯುತ್ತಾ, ದೇವರ ಮಹಿಮೆಯನ್ನು ಸಾರುತ್ತಾ, ಕೊಂಡಾಡುತ್ತಾ ಹಿಂದಿರುಗಿದರು. ದೇವದೂತನು ಅವರಿಗೆ ತಿಳಿಸಿದಂತೆ ಎಲ್ಲವೂ ಸಂಭವಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗೋಸ್ಕರ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕುರುಬರು ತಾವು ಕಂಡು ಕೇಳಿದ ಪ್ರತಿಯೊಂದು ಸಂಗತಿಗಾಗಿ ದೇವರನ್ನು ಕೊಂಡಾಡುತ್ತಾ ಆತನನ್ನು ಸ್ತುತಿಸುತ್ತಾ ತಮ್ಮ ಕುರಿಗಳಿದ್ದಲ್ಲಿಗೆ ಮರಳಿಹೋದರು. ದೇವದೂತರು ಅವರಿಗೆ ತಿಳಿಸಿದಂತೆಯೇ ಪ್ರತಿಯೊಂದು ಸಂಗತಿಯೂ ನಡೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಗಿತಾ ಗಾವುನ್ಗೆತ್ ದೆವಾಕ್ ಹೊಗ್ಳುನ್ಗೆತ್ ಕುರ್‍ಬುರಾ ಫಾಟಿ ಪರ್‍ತುನ್ ಗೆಲಿ. ತೆನಿ ಆಯ್ಕಲ್ಲ್ಯಾಸರ್ಕೆ ಅನಿ ದೆವಾಚ್ಯಾ ದುತಾನ್ ಸಾಂಗಟಲ್ಲ್ಯಾ ಸಾರ್ಕೆಚ್ ತೆಂಕಾ ಬಗುಕ್ ಗಾವ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:20
13 ತಿಳಿವುಗಳ ಹೋಲಿಕೆ  

ದೀನರ ಸಂತೋಷವು ಯೆಹೋವ ದೇವರಲ್ಲಿ ಹೆಚ್ಚಾಗುವುವು. ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸುವರು.


ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲರೂ, “ಆಮೆನ್!” ಎಂದು ಹೇಳಲಿ. ನೀವು ಯೆಹೋವ ದೇವರನ್ನು ಸ್ತುತಿಸಿರಿ.


ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.


ಕೂಡಲೇ ಅವನು ದೃಷ್ಟಿಯನ್ನು ಪಡೆದನು. ಆಗ ಅವನು ದೇವರನ್ನು ಸ್ತುತಿಸುತ್ತಾ, ಯೇಸುವನ್ನು ಹಿಂಬಾಲಿಸಿದನು. ಎಲ್ಲಾ ಜನರು ಅದನ್ನು ಕಂಡು, ದೇವರಿಗೆ ಸ್ತೋತ್ರ ಸಲ್ಲಿಸಿದರು.


ಜನರ ಗುಂಪು ಇದನ್ನು ಕಂಡು ಬೆರಗಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಕುಂದದ ಪ್ರೀತಿಗೋಸ್ಕರವೂ, ಅವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ದೇವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರ ಉಪಕಾರಮಾಡಲಿ, ಮಾನವರಿಗೆ ದೇವರು ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


ಅವನು, “ನನಗಿಂತ ಶಕ್ತರೊಬ್ಬರು ನನ್ನ ನಂತರ ಬರುತ್ತಾರೆ, ಅವರ ಪಾದರಕ್ಷೆಗಳ ಪಟ್ಟಿಗಳನ್ನು ದಾಸನಂತೆ ಬಾಗಿ ಬಿಚ್ಚುವುದಕ್ಕೂ ನಾನು ಅರ್ಹನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು