Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:22 - ಕನ್ನಡ ಸಮಕಾಲಿಕ ಅನುವಾದ

22 ಮೋಶೆಯ ನಿಯಮದ ಪ್ರಕಾರ ಮರಿಯಳಿಗೆ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ, ಯೋಸೇಫನು ಮತ್ತು ಮರಿಯಳು ಶಿಶುವನ್ನು ಕರ್ತದೇವರಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22-23 ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಳಿಕ ಮೋಶೆಯ ನೇಮದ ಪ್ರಕಾರ ಅವರ ಸೂತಕ ಕಳೆಯುವದಕ್ಕೆ ತಕ್ಕಷ್ಟು ದಿವಸಗಳು ತುಂಬಲು ಅವರು ಆ ಕೂಸನ್ನು ಯೆರೂಸಲೇವಿುಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಶುದ್ಧೀಕರಣದ ಬಗ್ಗೆ ಮೋಶೆಯ ಧರ್ಮಶಾಸ್ತ್ರವು ಬೋಧಿಸಿದ್ದ ಕಾರ್ಯಗಳನ್ನು ಮರಿಯಳು ಮತ್ತು ಯೋಸೇಫನು ಮಾಡುವ ಸಮಯ ಬಂತು. ಯೇಸುವನ್ನು ಪ್ರಭುವಿಗೆ (ದೇವರಿಗೆ) ಪ್ರತಿಷ್ಠಿಸಲು ಯೋಸೇಫನು ಮತ್ತು ಮರಿಯಳು ಆತನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಮೊಯ್ಜೆಚ್ಯಾ ಖಾಯ್ದ್ಯಾ ಸರ್ಕೆ ಅಪ್ನಾಚಿ ಪದ್ದತ್ ಪಾಳುಕ್ ಮನುನ್ ನಿತಳ್ ಹೊತಲೊ ಎಳ್ ಯೆಲ್ಲ್ಯಾತನ್ನಾ ಜುಜೆ, ಅನಿ ಮರಿ ಪೊರಾಕ್ ದೆವಾಕ್ ಭೆಟ್ವುಕ್ ಮನುನ್ ಜೆರುಜಲೆಮಾಚ್ಯಾ ದೆವಾಚ್ಯಾ ಗುಡಿತ್ ಗೆಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:22
4 ತಿಳಿವುಗಳ ಹೋಲಿಕೆ  

ಹನ್ನಳು ಹೋಗದೆ ತನ್ನ ಗಂಡನಿಗೆ, “ಮಗುವು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ನಾನು ಬರುವುದಿಲ್ಲ. ಅವನು ಯೆಹೋವ ದೇವರ ಸನ್ನಿಧಿಯ ದರ್ಶನಕ್ಕೂ ಅಲ್ಲಿ ಎಂದೆಂದಿಗೂ ಇರುವುದಕ್ಕೂ ನಾನು ಅವನನ್ನು ಆಮೇಲೆ ತೆಗೆದುಕೊಂಡು ಬರುವೆನು,” ಎಂದಳು.


ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಹೋರಿಯನ್ನು ಸಮರ್ಪಣೆ ಮಾಡಿದ ತರುವಾಯ, ಮಗುವನ್ನು ಏಲಿಯ ಬಳಿಗೆ ತಂದರು.


ಅವನು ಪವಿತ್ರಾತ್ಮ ಪ್ರೇರಣೆಯಿಂದ ದೇವಾಲಯದ ಅಂಗಳದೊಳಗೆ ಬಂದನು, ಆಗ ನಿಯಮವನ್ನು ಪೂರೈಸಲು ತಂದೆತಾಯಿಗಳು ಶಿಶು ಯೇಸುವನ್ನು ಒಳಗೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು